HEALTH TIPS

ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದ ಶೈಕ್ಷಣಿಕ ವರ್ಷದ ಸಮಾರೋಪ ಹಾಗೂ ಪ್ರತಿಭಾ ಭಾರತಿ ಕಾರ್ಯಕ್ರಮ

ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಈ ಶೈಕ್ಷಣಿಕ ವರ್ಷದ ಸಮಾರೋಪ ಹಾಗೂ ಪ್ರತಿಭಾ ಭಾರತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ಅತಿಥಿಗಳಾಗಿ ಉಪಸ್ಥಿತರಿದ್ದ ನಿವೃತ್ತ ಪ.ಜಾತಿ ಅಭಿವೃದ್ಧಿ ಅಧಿಕಾರಿ ದಯಾನಂದ. ಕೆ, ಮಾತನಾಡಿ, ವಿದ್ಯಾಪೀಠದ ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಸಂಸ್ಕøತಿಗಳ ಬಗ್ಗೆ ಅರಿವಿರುವವರು. ಇಪ್ಪತ್ತೈದು ವರ್ಷಗಳ ಸಾಧನೆ ಸ್ತುತ್ಯರ್ಹವಾದುದು ಎಂದರು. 


ಸರ್ವೇ ಇಂಡಿಯಾದ ಅಧಿಕಾರಿ ಗಣೇಶ್ ಭಟ್ ದೊಡ್ಡಮಾಣಿ ಮಾತನಾಡಿ, ಸಂಸ್ಕಾರ ಮತ್ತು ಸಂಸ್ಕೃತಿಗಳು ಭಾರತೀಯರ ಜೀವಾಳವಾಗಬೇಕು. ಇಂತಹ ಶಿಕ್ಷಣ ಭಾರತೀ ವಿದ್ಯಾಪೀಠದ ಮೂಲಕ ಸಾಕಾರಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು.


ಎಲ್.ಕೆ.ಜಿ.ಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು. 2025-26 ನೇ ಶೈಕ್ಷಣಿಕ ವರ್ಷದಲ್ಲಿ ಪೂರ್ಣ ಹಾಜರಾತಿಯನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು. ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಎಡನಾಡು ಸಹಕಾರಿ ಬ್ಯಾಂಕ್ ಆಡಳಿತ ಸಮಿತಿ ಅಧ್ಯಕ್ಷ ಶ್ಯಾಮರಾಜ ದೊಡ್ಡಮಾಣಿ, ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್.ಎಸ್.ಪ್ರಸಾದ್, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀನಂದ ಬೇಕಲ್ ಸ್ವಾಗತಿಸಿ, ಯುಕ್ತಿ ವಂದಿಸಿದಳು. ವಿದ್ಯಾರ್ಥಿಗಳಾದ ಸಮರ್ಥ್‍ಕೃಷ್ಣ ಶೆಟ್ಟಿ ಹಾಗೂ ಚಂದನ್ ಬಲ್ಲಾಳ್ ಕಾರ್ಯಕ್ರಮವನ್ನು ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries