HEALTH TIPS

ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಪ್ರಶಸ್ತಿ ಪ್ರದಾನ-ವಿಚಾರಗೋಷ್ಠಿ

ಮಂಜೇಶ್ವರ: ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿ ಮತ್ತು ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಕಥಾ ಪ್ರಶಸ್ತಿ ಪ್ರದಾನ ಸಮಾರಂಭ ಗೋವಿಂದ ಪೈ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು. 'ಕೃಷ್ಣಯ್ಯನ ಕೊಳಲು' ಕಾದಂಬರಿಗೆ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾದ ಜಾನಪದ ತಜ್ಞ ಡಾ. ಟಿ. ಗೋವಿಂದರಾಜು ಮತ್ತು 'ಕೆಂಪು ನದಿ' ಕಥಾಸಂಕಲನಕ್ಕಾಗಿ ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಕಥಾ ಪ್ರಶಸ್ತಿಗೆ ಆಯ್ಕೆಯಾದ ಲಿಂಗರಾಜ ಸೊಟ್ಟಪ್ಪನವರ ಅವರಿಗೆ ಖ್ಯಾತ ಸಾಹಿತಿ ಡಾ. ನಾ. ಮೊಗಸಾಲೆಯವರು ಪ್ರಶಸ್ತಿ ಪ್ರದಾನ ಮಾಡಿದರು. 


ಸಾಹಿತ್ಯ ಗಂಗಾ ಸಂಸ್ಥೆಯು ಪ್ರಶಸ್ತಿಯ ಯೋಗ್ಯತೆಯನ್ನು ಹೆಚ್ಚಿಸುವ ಕೆಲಸವನ್ನು ಮಾಡುತ್ತಿದೆ. ಜಾತಿ, ಮತ, ಪಕ್ಷ, ಪಂಥಗಳಿಗೆ ಕಟ್ಟುಬೀಳದೆ ಕೃತಿಯ ಸತ್ವ ಮತ್ತು ಗುಣಮಟ್ಟವನ್ನು ಮಾತ್ರ ಮಾನದಂಡವಾಗಿಸಿಕೊಂಡು ಯೋಗ್ಯರನ್ನಷ್ಟೇ ಆಯ್ದು ಪ್ರಶಸ್ತಿಯನ್ನು ನೀಡುತ್ತದೆ. ಇದರಿಂದಾಗಿ ಎಲೆಮರೆಯ ಕಾಯಿಗಳು ಬೆಳಕಿಗೆ ಬರುತ್ತವೆ. ಕನ್ನಡದ ಪ್ರಮುಖ ಲೇಖಕರಿಗೆ ಪ್ರಶಸ್ತಿ ದೊರೆತಿರುವುದು ಸಂತಸದ ವಿಚಾರವಾಗಿದೆ. ನಾಡಿಗೆ ಗೌರವವನ್ನು ತರುವ ಇಂಥ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಾಗಲಿ ಎಂದು ಅವರು ಅಭಿಪ್ರಾಯಪಟ್ಟರು. 

ಪ್ರಾಂಶುಪಾಲ ಡಾ. ಮೊಹಮ್ಮದ್ ಅಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವ ವಿಮರ್ಶಕ ವಿಕಾಸ ಹೊಸಮನಿಯವರು ಅಭಿನಂದನ ಭಾಷಣವನ್ನು ಮಾಡಿದರು. ಪ್ರಾಧ್ಯಾಪಕಿ ಜಯಂತಿ ಸ್ವಾಗತಿಸಿದರು. ಪೆÇ್ರ. ಶಿವಶಂಕರ ಪಿ, ಡಾ. ಸುಭಾಷ್ ಪಟ್ಟಾಜೆ, ಡಾ. ರತ್ನಾಕರ ಕುನಗೋಡು, ಡಾ. ಪ್ರವೀಣ ಪದ್ಯಾಣ, ಶ್ರೀಮತಿ ರೇಷ್ಮಾ ಭಟ್, ಶ್ರೀಮತಿ ಸೌಮ್ಯ ಪ್ರವೀಣ್, ಶ್ರೀ ಕಲ್ಲಚ್ಚು ಮಹೇಶ ನಾಯಕ್ ವಿಚಾರಗೋಷ್ಠಿಯಲ್ಲಿ ಪ್ರಬಂಧಗಳನ್ನು ಮಂಡಿಸಿದರು. ಡಾ. ಯು. ಮಹೇಶ್ವರಿ, ಪ್ರೊ. ಪಿ. ಎನ್. ಮೂಡಿತ್ತಾಯ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries