ಕೋಝಿಕ್ಕೋಡ್ : ಪೆರಂಬ್ರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಎಲ್‌ಡಿಎಫ್ ಸಂಚಾಲಕ ಟಿ.ಪಿ. ರಾಮಕೃಷ್ಣನ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ತಹಿಲಿಯಾದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ, ಕೋಮು ಆಧಾರಿತವಾಗಿ ಮತ ಯಾಚಿಸಲಾಗುತ್ತಿದೆ ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಪ್ರಮುಖ ಘಟಕವಾದ ಐಯುಎಂಎಲ್ ಆಯೋಗಕ್ಕೆ ದೂರು ನೀಡಿತ್ತು.
ದೂರು ದಾಖಲಾಗಿದೆ. ಇದರ ಆಧಾರದಲ್ಲಿ ಎಲ್‌ಡಿಎಫ್ ಅಭ್ಯರ್ಥಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ತನಿಖೆ ನಡೆಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

