ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಏಪ್ರಿಲ್ 23ರಂದು ಮೊದಲ ಹಂತದ ಮತದಾನ ನಡೆಯಲಿದ್ದು. ಮುಕ್ತ, ನ್ಯಾಯಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಚುನಾವಣಾ ನಿರ್ವಹಣೆಯಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಸಿಇಸಿ, ಚುನಾವಣೆಗಳು ಭಯ , ಹಿಂಸಾಚಾರ ಮತ್ತು ಬೆದರಿಕೆ ಮುಕ್ತ ವಾತವಾರಣ ಸೃಷ್ಟಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳು ಅಥವಾ ಸ್ವಾಯತ್ತ ಸಂಸ್ಥೆಗಳ ಯಾವುದೇ ಉದ್ಯೋಗಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಅವಕಾಶ ನೀಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಚುನಾವಣಾ ಆಯೋಗವು ಬಿಜೆಪಿ ಹೇಳಿದಂತೆ ಕೆಲಸಮಾಡುತ್ತಿದೆ ಎಂಬ ಟಿಎಂಸಿ ಆರೋಪವನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಚುನಾವಣಾ ಆಯೋಗ ಮತ್ತು ಟಿಎಂಸಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಗೆ ಲಾಭ ಮಾಡಿಕೊಡಲು ಚುನಾವಣಾ ಆಯೋಗವು ಉದ್ದೇಶಪೂರ್ವಕವಾಗಿ ಮತದಾರರ ಮತದಾನದ ಹಕ್ಕನ್ನು ಕಸಿದುಕೊಂಡಿವೆ ಎಂದು ಟಿಎಂಸಿ ಆರೋಪಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: 6 ಗ್ಯಾರಂಟಿ ಘೋಷಿಸಿದ ಪ್ರಧಾನಿ ಮೋದಿSIಖ ಕಾರ್ಯಕ್ಕೆ ಅಡ್ಡಿ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಚುನಾವಣಾ ಆಯೋಗ ಮತ್ತು ಬಿಜೆಪಿ ಆರೋಪವನ್ನು ತಿರಸ್ಕರಿಸಿದ್ದು, ಇದು ಆಧಾರರಹಿತ ಎಂದು ಕಿಡಿಕಾರಿದೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ 23ರಂದು ಹಾಗೂ ಎರಡನೇ ಹಂತದ ಮತದಾನ ಏಪ್ರಿಲ್ 29 ರಂದು ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ .

