ಚಂಡೀಗಢ: ಚಂಡೀಗಢದಲ್ಲಿ ಬುಧವಾರ ಸಂಜೆ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.
ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಭಾರೀ ಸ್ಫೋಟದ ಶಬ್ದ ಕೇಳಿಬಂತ್ತು ಎಂದು ರಾಜ್ಯ ಬಿಜೆಪಿ ನಾಯಕ ವಿನೀತ್ ಜೋಶಿ ಅವರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಜೋಶಿ ಹೇಳಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

