ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವೆ ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಮಾತುಕತೆಯು ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಕಾರಣವಾಗಲಿದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರೊಂದಿಗಿನ ಮಾತುಕತೆಯಲ್ಲಿ ಶೆಹಬಾಜ್ ಷರೀಫ್, ಶಾಂತಿ ಸ್ಥಾಪನೆಯ ಕುರಿತು ಮಾತನಾಡಿದ್ದಾರೆ ಎಂದು ಅಲ್ಲಿನ ವಿದೇಶಾಂಗ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಪಾಕಿಸ್ತಾನ ಬಯಸಿದ್ದು, ಎರಡೂ ಕಡೆಗಳಿಗೂ ಸಹಾಯವಾಗುವಂತಹ ನಿರ್ಧಾರವನ್ನು ತೆಗೆದುಕೊಳ್ಳಲು ಬಯಸುತ್ತೇವೆ ಎಂದು ಹೇಳಿದ್ದಾರೆ.
ಇರಾನ್ ಜೊತೆ ಶಾಂತಿ ಮಾತುಕತೆಗಾಗಿ ಪಾಕಿಸ್ತಾನಕ್ಕೆ ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಭಾಗಿಯಾಗಿದೆ. ಅವರನ್ನು ಪಾಕ್‌ನ ಹಿರಿಯ ಅಧಿಕಾರಿಗಳು ಸ್ವಾಗತಿಸಿದ್ದರು.
ಫೆ.28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದಾಳಿ ನಡೆಸುವ ಮೂಲಕ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿದೆ.

