ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಹಸಿರುವಾಣಿ ಸಮರ್ಪಣಾ ಶೋಭಾಯಾತ್ರೆ ಕರಂದಕ್ಕಾಡು ಶ್ರೀ ವೀರಹನುಮಾನ್ ಮಂದಿರ ಆರಂಭಗೊಂಡು, ಶ್ರೀ ಅಯ್ಯಪ್ಪ ಮಂದಿರಕ್ಕೆ ತಲುಪಿತು. ನಂತರ ಉಗ್ರಾಣ ಮುಹೂರ್ತ ನೆರವೇರಿತು.
ಎಡನೀರುಮಠಾಧೀಶ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿಯವರಪೂರ್ಣಾನುಗ್ರಹದೊಂದಿಗೆ ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ದಿವ್ಯಪೌರೋಹಿತ್ಯದಲ್ಲಿ ವಿವಿಧ ವೈದಿಕ, ಧಾರ್ಮಿಕಹಾಗೂ ಸಾಂಸ್ಕøತಿಕಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ನಡೆಯುತ್ತಿದೆ. ಸಂಜೆ ಎಡನೀರುಶ್ರೀಗಳಿಗೆ ಹಾಗೂ ತಂತ್ರಿವರ್ಯರಿಗೆ ಪೂರ್ಣಕುಂಭ ಸ್ವಾಗತ, ಗರ್ಭಗುಡಿ ಬಾಗಿಲಿಗೆ ಬೆಳ್ಳಿ ಹೊದಿಕೆ ಮತ್ತು ಗರ್ಭಗುಡಿಯ ಮುಂಭಾಗಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಣೆ, ಧಾರ್ಮಿಕ ಸಭೆ, ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು.
ಏ.20ರಂದು ಸಂಜೆ 5.30ಕ್ಕೆ ಸಭಾಕಾರ್ಯಕ್ರಮದಲ್ಲಿ ಕೊಂಡೆವೂರು ಸ್ವಾಮೀಜಿಯವರಿಂದ ಆಶೀರ್ವಚನ, ರಾತ್ರಿ 7.30ಕ್ಕೆ ನಾಗದಿಗಂಬರಿ ಮಲೆಯಾಳ ನಾಟಕಪ್ರದರ್ಶನಗೊಳ್ಳಲಿದೆ.



