ನವದೆಹಲಿ: ಮಕ್ಕಳ ಕಳ್ಳ ಸಾಗಾಣೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ದೇಶದಾದ್ಯಂತ ಸಕ್ರಿಯವಾಗಿರುವ ಈ ಜಾಲಗಳ( ಮಕ್ಕಳ ಕಳ್ಳಸಾಗಣೆ ) ವಿರುದ್ಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಎಚ್ಚರಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಮತ್ತು ಅವುಗಳ ಗೃಹ ಇಲಾಖೆಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಉನ್ನತ ನ್ಯಾಯಾಲಯವಾಗಿರುವುದರಿಂದ ನಾವು ಮೇಲ್ವಿಚಾರಣೆ ಮಾಡಬಹುದು. ಆದರೆ ಅಂತಿಮವಾಗಿ ಕ್ರಮ ಕೈಗೊಳ್ಳಬೇಕಾದವರು ರಾಜ್ಯ ಸರ್ಕಾರ, ಪೊಲೀಸ್ ಮತ್ತು ಇತರ ಸಂಸ್ಥೆಗಳು ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಬುಧವಾರ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.
ಈ ವಿಷಯದ ಕುರಿತು ಮುಂದಿನ ವಿಚಾರಣೆ ಏಪ್ರಿಲ್ 29 ರಂದು ನಡೆಯಲಿದೆ.

