HEALTH TIPS

ಪೆರಡಾಲದಲ್ಲಿ ಶ್ರೀ ಉದನೇಶ್ವರ, ಸಪರಿವಾರ ದೇವತಾ ಪ್ರತಿಷ್ಠೆ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ 7ನೇ ದಿನ ಗುರುವಾರ ಪ್ರಾತಃಕಾಲ 7.40 ರಿಂದ 9.30 ರಿಂದ ಮಧ್ಯದ ವೃಷಭ ಲಗ್ನದಲ್ಲಿ ಶ್ರೀ ಉದನೇಶ್ವರ ದೇವರು, ಕುಟ್ಟಿಚ್ಚಾತ ಸಹಿತ ಪರಿವಾರ ದೇವತಾ ಪ್ರತಿಷ್ಠೆ ಜರಗಿತು. ಪರಮಪೂಜ್ಯ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದಿವ್ಯಸಾನ್ನಿಧ್ಯವನ್ನು ವಹಿಸಿದ್ದರು. ಕ್ಷೇತ್ರಾಚಾರ್ಯ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿವಿಧಾನದಲ್ಲಿ ಶ್ರೀ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ ನಡೆಯಿತು.  


ಪ್ರಾತಃಕಾಲ 108 ತೆಂಗಿನಕಾಯಿ ಮಹಾಗಣಪತಿ ಹೋಮ ನಡೆಯಿತು. ಸಂಜೆ ನಿತ್ಯನೈಮಿತ್ತಿಕಾದಿಗಳ ನಿರ್ಣಯ, ಭದ್ರದೀಪವಿಟ್ಟು ಕವಾಟಬಂಧನ, ಅಂಕುರ ಪೂಜೆ, ಸೋಪಾನಪೂಜೆ ನಡೆಯಿತು. ಊರಪರವೂರ ಸಹಸ್ರಾರು ಮಂದಿ ಭಗವದ್ಭಕ್ತರು ಭಕ್ತಿಶ್ರದ್ಧೆಯಿಂದ ಪಾಲ್ಗೊಂಡಿದ್ದರು. ಮಧ್ಯಾಹ್ನ ಅನ್ನದಾನ ನಡೆಯಿತು. ಏ.26 ರಂದು ಸಹಸ್ರ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ.

ಕೊಲ್ಲೂರು ದೇವಸ್ಥಾನದಿಂದ ಸುವಸ್ತುಗಳು:

ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನದ ವತಿಯಿಂದ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಸುವಸ್ತುಗಳನ್ನು ನೀಡಲಾಯಿತು. 480 ಕಿಲೋ ಅಕ್ಕಿ, 30 ಕಿಲೋ ಗೋಘೃತ, 30 ಕಿಲೋ ತೊಗರಿ, 100 ಕಿಲೋ ಸಕ್ಕರೆ ಹಾಗೂ ಇನ್ನಿತರ ವಸ್ತುಗಳನ್ನು ದೇಣಿಗೆಯಾಗಿ ನೀಡಲಾಯಿತು. ಪೆರಡಾಲ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಸುವಸ್ತುಗಳನ್ನು ಶ್ರದ್ಧಾಭಕ್ತಿಯಿಂದ ಪಡೆದುಕೊಂಡರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries