HEALTH TIPS

ರಾಜನಾಥ್ ಸಿಂಗ್ ದೇಶದ ಮುಂದಿನ ರಾಷ್ಟ್ರಪತಿ? ಜೂನ್ ನಲ್ಲಿ ನೇಮಕ ಸಾಧ್ಯತೆ!

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶದ ಮುಂದಿನ ರಾಷ್ಟ್ರಪತಿ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. 

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಜೂನ್ 2027 ರಲ್ಲಿ ಭಾರತದ ರಾಷ್ಟ್ರಪತಿಯಾಗಿ ಬಡ್ತಿ ನೀಡಲಾಗುವುದು ಎಂಬ ಗುಸುಗುಸು ಉತ್ತರ ಪ್ರದೇಶ ಬಿಜೆಪಿಯ ಪ್ರಬಲ ಠಾಕೂರ್ ಸಮುದಾಯದ ನಾಯಕರ ಗುಂಪಿನಲ್ಲಿ ಕೇಳಿಬರುತ್ತಿದೆ.

ಅಲ್ಲದೇ ರಾಷ್ಟ್ರಪತಿ ಭವನಕ್ಕೆ ರಾಜನಾಥ್ ಸಿಂಗ್ ಹೆಸರನ್ನು ಶಿಫಾರಸು ಮಾಡಲು ಆರ್ ಎಸ್ ಎಸ್ ಕೂಡಾ ಹೆಚ್ಚಿನ ಆಸಕ್ತಿ ವಹಿಸಿದೆ.

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಘೋಷಿಸಿದ್ದರಿಂದ ಬ್ರಾಹ್ಮಣ ನಾಯಕರು ಅಸಮಾಧಾನಗೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪಂಕಜ್ ಚೌಧರಿ ಈಗಾಗಲೇ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದು, ಅದು ಜೂನ್ ಒಳಗೆ ಅಂಗೀಕಾರವಾಗುವ ಸಾಧ್ಯತೆಯಿದೆ. ರಾಜನಾಥ್ ಸಿಂಗ್ ಅವರನ್ನು ರಾಷ್ಟ್ರಪತಿಯನ್ನಾಗಿ ನೇಮಕ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries