ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, "ಜನಗಣತಿಯನ್ನು ಏಕೆ ನಡೆಸುತ್ತಿಲ್ಲ ಎಂದು ಅಖಿಲೇಶ್ ಯಾದವ್ ಕೇಳಿದರು.
ಜನಗಣತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ನಾನು ಇಡೀ ದೇಶಕ್ಕೆ ತಿಳಿಸಲು ಬಯಸುತ್ತೇನೆ. ಜನಗಣತಿಯ ಜೊತೆಗೆ ಜಾತಿ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಧರ್ಮೇಂದ್ರ ಯಾದವ್ ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಮಾತನಾಡಿದರು. ಇದು ಅಸಂವಿಧಾನಿಕ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಅಸಂವಿಧಾನಿಕ ಎಂದು ಹೇಳಿದರು.

