94 ವರ್ಷದ ಮೊಹ್ಸಿನಾ ಕಿದ್ವಾಯಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬುಧವಾರ ಬೆಳಿಗ್ಗೆ ನೋಯ್ಡಾದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ರಾಝಿ ಉರ್ ರೆಹಮಾನ್ ಕಿದ್ವಾಯಿ ತಿಳಿಸಿದ್ದಾರೆ.
ನಿಝಾಮುದ್ದೀನ್‌ನಲ್ಲಿರುವ ದಫನ ಭೂಮಿಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಬಾರಾಬಂಕಿ ಮೂಲದ ಮೊಹ್ಸಿನಾ ಕಿದ್ವಾಯಿ ಅವರು ರಾಜೀವ್ ಗಾಂಧಿ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಅವರು ಲೋಕಸಭೆ ಮತ್ತು ರಾಜ್ಯಸಭೆಯನ್ನು ಹಲವು ಬಾರಿ ಪ್ರತಿನಿಧಿಸಿದ್ದರು.
ಕಿದ್ವಾಯಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

