HEALTH TIPS

ಎಲ್ಲಾ ಮತಗಟ್ಟೆಗಳಿಗೂ ವೆಬ್‍ಕಾಸ್ಟಿಂಗ್ ವ್ಯವಸ್ಥೆ-ಕಂಟ್ರೋಲ್ ರೂಮ್‍ಗೆ ಜಿಲ್ಲಾಧಿಕಾರಿ ಭೇಟಿ

ಕಾಸರಗೋಡು: 2026ರ ಕೇರಳಂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಲಾದ ವೆಬ್‍ಕಾಸ್ಟಿಂಗ್ ನಿಯಂತ್ರಣ ಕೊಠಡಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ ನೀಡಿ ಚಟುವಟಿಕೆಗಳನ್ನು ಪರಿಶೀಲಿಸಿದರು. 


ಪಾರದರ್ಶಕ ಮತ್ತು ಸುರಕ್ಷಿತ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ವ್ಯಾಪಕ ಸೌಲಭ್ಯಗಳೊಂದಿಗೆ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆಯನ್ನು ಸ್ಥಾಪಿಸಿರುವುದು ಈ ಬಾರಿಯ ವಿಶೇಷತೆಯಾಗಿದೆ. ಈ ವ್ಯವಸ್ಥೆಯ ಮೂಲಕ ಎಲ್ಲಾ ಮತಗಟ್ಟೆಗಳು ಮತ್ತು ಮತಗಟ್ಟೆ ಆವರಣ ಜಿಲ್ಲಾ ಚುನಾವಣಾಧಿಕಾರಿಗಳ ನೇರ ಮೇಲ್ವಿಚಾರಣೆಯಲ್ಲಿರಲಿದೆ.  ಭದ್ರತಾ ವ್ಯವಸ್ಥೆ ಮತ್ತು ಮತದಾನದ ವಿಧಾನಗಳನ್ನು ಇದರ ಮೂಲಕ ಸೂಕ್ಷ್ಮವಾಗಿ ಅವಲೋಕಿಸಲು ಸಾಧ್ಯವಾಘಲಿದೆ. ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಎಸ್. ಬಿಜು, ವೆಬ್‍ಕಾಸ್ಟಿಂಗ್ ನೋಡಲ್ ಅಧಿಕಾರಿ ಎಸ್. ಫ್ಯಾಂಟಿನ್ ಕಾರ್ನೆಲಿಯಸ್, ಜಿಲ್ಲಾ ಮಾಹಿತಿ ಅಧಿಕಾರಿ ಎಂ. ಮಧುಸೂದನನ್ ಮತ್ತು ಐಟಿ ನೋಡಲ್ ಅಧಿಕಾರಿ ಕೆ. ಲೀನಾ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries