HEALTH TIPS

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ವಿಪಕ್ಷಗಳ ಬೆಂಬಲ ಕೇಳಿದ ಮೋದಿ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿನ ವಾರ ಸಂಸತ್‌ನಲ್ಲಿ ಅವಿರೋಧವಾಗಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ಉಭಯ ಸದನಗಳ ಎಲ್ಲಾ ನಾಯಕರ ಬೆಂಬಲವನ್ನು ಕೋರಿದ್ದಾರೆ.

2029ರಿಂದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಉದ್ದೇಶವನ್ನು 'ನಾರಿಶಕ್ತಿ ವಂದನ್ ಅಧಿನಿಯಮ, 2021' ಹೊಂದಿದೆ.

ವಿಸ್ತೃತ ಮಾತುಕತೆಗಳ ಬಳಿಕ ನಾರಿಶಕ್ತಿ ವಂದನ ಅಧಿನಿಯಮವನ್ನು ಅದರ ನೈಜ ಆಶಯದೊಂದಿಗೆ ದೇಶಾದ್ಯಂತ ಜಾರಿಗೊಳಿಸುವ ಸಮಯ ಬಂದಿದೆ ಎಂಬ ನಿರ್ಧಾರಕ್ಕೆ ನಾವು ಬಂದಿದ್ದೇವೆ. 2029ರ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳನ್ನು ಮಹಿಳಾ ಮೀಸಲಾತಿಯೊಂದಿಗೆ ನಡೆಸುವುದು ಅನಿವಾರ್ಯವಾಗಿದೆ ಎಂದು ಮೋದಿ 'ಎಕ್ಸ್'ನಲ್ಲಿ ಪ್ರಕಟಿಸಿದ ಪೋಸ್ಟ್‌ ನಲ್ಲಿ ಹೇಳಿದ್ದಾರೆ.

ಏಪ್ರಿಲ್ 16ರಂದು ಆರಂಭಗೊಳ್ಳಲಿರುವ ಸಂಸತ್ ಅಧಿವೇಶನದಲ್ಲಿ ನಾರಿಶಕ್ತಿ ವಂದನ ಅಧಿನಿಯಮವನ್ನು ಅಂಗೀಕರಿಸಲು ಸರ್ಕಾರ ಬಯಸುತ್ತಿದೆ.

ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಒದಗಿಸುವ ಉದ್ದೇಶ ಯಾವುದೇ ಪಕ್ಷ ಅಥವಾ ವ್ಯಕ್ತಿಗಿಂತ ಮಿಗಿಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಮಹಿಳೆಯರು ಹಾಗೂ ಭವಿಷ್ಯದ ತಲೆಮಾರಿನೆಡೆಗೆ ಜವಾಬ್ದಾರಿಯನ್ನು ಪ್ರದರ್ಶಿಸುವ ಕ್ಷಣ ಇದಾಗಿದೆ ಎಂದು ಅವರು ಹೇಳಿದ್ದಾರೆ.

"ದೀರ್ಘಕಾಲದಿಂದ ರಾಜಕೀಯದಲ್ಲಿ ಮಹಿಳೆಯರ ಪ್ರತಿನಿಧಿತ್ವವನ್ನು ಹೆಚ್ಚಿಸುವ ಅಗತ್ಯವನ್ನು ಎಲ್ಲಾ ರಾಜಕೀಯ ಪಕ್ಷಗಳು ಒತ್ತಿಹೇಳುತ್ತಿವೆ. ಈ ಆಶೆಯನ್ನು ವಾಸ್ತವಕ್ಕೆ ತರುವ ಸಮಯ ಬಂದಿದೆ" ಎಂದು ಅವರು ಹೇಳಿದ್ದಾರೆ.

2023ರಲ್ಲಿ ತನ್ನ ಸರ್ಕಾರ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಿದಾಗ ಅವಿರೋಧ ಬೆಂಬಲ ವ್ಯಕ್ತವಾಗಿದ್ದನ್ನು ಪ್ರಧಾನಿ ಸ್ಮರಿಸಿದ್ದಾರೆ.

►ಮಹಿಳಾ ಮೀಸಲಾತಿ ಮಸೂದೆ: ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರ ಬಹುಮತ ಅಗತ್ಯ

ಮಹಿಳಾ ಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಗೆ ಅವಕಾಶ ನೀಡುವ ನಾರಿಶಕ್ತಿ ವಂದನ ಅಧಿನಿಯಮ ಅಂಗೀಕರಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಲೋಕಸಭೆಯಲ್ಲಿ ಮೂರನೇ ಎರಡರ ಬಹುಮತ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಮಸೂದೆ ಅಂಗೀಕಾರಕ್ಕೆ ಪ್ರತಿಪಕ್ಷಗಳ ಬೆಂಬಲ ಅಗತ್ಯವಾಗಿದೆ.

►ಲೋಕಸಭಾ ಸ್ಥಾನಗಳ ಸಂಖ್ಯೆ 816ಕ್ಕೆ ಏರಿಕೆ ಸಾಧ್ಯತೆ

ಮಹಿಳಾ ಮೀಸಲಾತಿ ಜಾರಿಗಾಗಿ ಸಂವಿಧಾನ ತಿದ್ದುಪಡಿಯಿಂದ ಲೋಕಸಭಾ ಸ್ಥಾನಗಳ ಸಂಖ್ಯೆ 543ರಿಂದ 816ಕ್ಕೆ ಏರಲಿದ್ದು, 273 ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟವು ಕಳೆದ ವಾರದ ಆರಂಭದಲ್ಲಿ ಸಂವಿಧಾನಕ್ಕೆ ಮೂರು ತಿದ್ದುಪಡಿಗಳಿಗೆ ಅನುಮೋದನೆ ನೀಡಿದೆ.

ಸಂವಿಧಾನದ (131ನೇ ತಿದ್ದುಪಡಿ) ವಿಧೇಯಕ, ಕ್ಷೇತ್ರ ಪುನರ್‌ವಿಂಗಡಣಾ ವಿಧೇಯಕ ಹಾಗೂ ಮಹಿಳಾ ಮೀಸಲಾತಿಯನ್ನು ದಿಲ್ಲಿ, ಜಮ್ಮು-ಕಾಶ್ಮೀರ ಮತ್ತು ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲು ಅವಕಾಶ ನೀಡುವ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries