HEALTH TIPS

ಅಟಾರ್ನಿ ಜನರಲ್ ಹುದ್ದೆಯಿಂದ ಪಾಮ್ ಬೊಂಡಿ ವಜಾಗೊಳಿಸಿದ ಡೊನಾಲ್ಡ್ ಟ್ರಂಪ್

 ವಾಷಿಂಗ್ಟನ್: ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಮೆರಿಕದ ಅಟಾರ್ನಿ ಜನರಲ್ ಪಾಮ್ ಬೊಂಡಿ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಗುರುವಾರ ಆದೇಶ ಹೊರಡಿಸಿದ್ದಾರೆ. 


ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ತನಿಖೆಯ ನಿರ್ವಹಣೆಯಲ್ಲಿ ಪಾಮ್ ಬೊಂಡಿ ವಿಫಲರಾಗಿದ್ದಾರೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅಟಾರ್ನಿ ಜನರಲ್ ಹುದ್ದೆಯಿಂದ ಅವರನ್ನು ವಜಾ ಮಾಡಲಾಗಿದೆ ಎಂದು ಶ್ವೇತಭವನದ ಖಚಿತ ಮೂಲಗಳು ತಿಳಿಸಿವೆ.

ಟ್ರಂಪ್‌ ಅವರ ರಾಜಕೀಯ ಟೀಕಾಕಾರರ ವಿರುದ್ಧದ ಪ್ರಕರಣಗಳು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ವೇಗವಾಗಿ ಮುನ್ನಡೆಸುತ್ತಿಲ್ಲ ಎಂಬ ವಿಷಯದಲ್ಲಿ ಪಾಮ್ ಬೊಂಡಿಯವರ ಬಗ್ಗೆ ಟ್ರಂಪ್‌ ಅಸಮಾಧಾನ ಹೊಂದಿದ್ದರು ಎಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೊಂಡಿಯವರ ಪದಚ್ಯುತಿಯನ್ನು ದೃಢಪಡಿಸಿರುವ ಟ್ರಂಪ್, ಉಪ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಅವರು ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ನನ್ನ ಸ್ನೇಹಿತೆಯಾಗಿರುವ ಬೊಂಡಿ ಅವರು ಇನ್ನು ಮುಂದೆ ಖಾಸಗಿ ವಲಯದಲ್ಲಿನ ತಮ್ಮ ಉದ್ಯೋಗಕ್ಕೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries