HEALTH TIPS

ಬಿಜೆಪಿ ಮುಸ್ಲಿಂ ವಿರೋಧಿಯಲ್ಲ, ಅಸ್ಸಾಂ, ಬಂಗಾಳದಲ್ಲಿ ಜಯಭೇರಿ ನಿಶ್ಚಿತ; ಗಡ್ಕರಿ

ನವದೆಹಲಿ: ಮುಂಬರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಪಿಟಿಐ ಸುದ್ದಿಸಂಸ್ಥೆಗೆ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ʼಬಿಜೆಪಿಯು ನುಸುಳುಕೋರರನ್ನು ವಿರೋಧಿಸುತ್ತದೆಯೇ ಹೊರತು ಮುಸ್ಲಿಮರನ್ನಲ್ಲ.

ಧರ್ಮದ ಭೇದವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವುದು ನಮ್ಮ ಪಕ್ಷದ ನೀತಿಯಾಗಿದೆʼ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳು ಹರಡುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡದಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ಪಕ್ಷದ ಪ್ರಚಾರದ ಕುರಿತು ಮಾತನಾಡಿದ ಅವರು, ಮೂಲಸೌಕರ್ಯ ಮೇಲಿನ ಹೂಡಿಕೆಗಳು ಮತ್ತು ಉತ್ತಮ ಆಡಳಿತ ನಮ್ಮ ಪ್ರಚಾರದ ಪ್ರಮುಖ ಆಧಾರಸ್ತಂಭಗಳಾಗಿವೆ. ಜನರು ಬದಲಾವಣೆಯನ್ನು ಬಯಸುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಲಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ಕಠಿಣವಾಗಿದೆ ಎಂಬುದನ್ನು ಒಪ್ಪಿಕೊಂಡ ಗಡ್ಕರಿ, ಅನಗತ್ಯ ರಾಜಕೀಯ ಸಂಘರ್ಷಗಳಿಗಿಂತ ಆಡಳಿತ ಮತ್ತು ಅಭಿವೃದ್ಧಿಯ ವಿಷಯಗಳ ಮೇಲೆ ಪಕ್ಷವು ಹೆಚ್ಚಿನ ಗಮನ ಹರಿಸಲಿದೆ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕೇಂದ್ರ ಸರ್ಕಾರ ಅಕ್ರಮ ಎಸಗುತ್ತಿದೆ ಎಂಬ ಮಮತಾ ಬ್ಯಾನರ್ಜಿ ಅವರ ಆರೋಪವನ್ನು ತಳ್ಳಿಹಾಕಿದ ಅವರು, ಬಿಜೆಪಿ ರಾಷ್ಟ್ರೀಯ ಹಿತಾಸಕ್ತಿಗೆ ಮಾತ್ರ ಆದ್ಯತೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಏಪ್ರಿಲ್ 9 ರಂದು ಚುನಾವಣೆ ನಡೆದರೆ, ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಎಲ್ಲಾ ಚುನಾವಣೆಗಳ ಫಲಿತಾಂಶ ಮೇ 4ರಂದು ಹೊರಬೀಳಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries