ಕಾಸರಗೋಡು: ಪತ್ರಿಕಾ ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪ್ರಕಟಿಸಲಾಗಿದ್ದು, ಬೀದರ್ ನಲ್ಲಿ ಎಪ್ರಿಲ್ 11ಮತ್ತು 12 ರಂದು ನಡೆಯುವ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ವಿವಿಧ ಪತ್ರಿಕೆಯಲ್ಲಿ ವೃತ್ತಿಜೀವನ ಆರಂಭಿಸಿದ ಶ್ರೀಕಾಂತ ಅವರ ಛಾಯಾಚಿತ್ರಗಳು ಬಹುತೇಕ ಕನ್ನಡ ಮತ್ತು ಮಲಯಾಳ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕೆಲವು ವರ್ಷಗಳಿಂದ ಅವರು ಕೇರಳ ಸರ್ಕಾರದ ವಾರ್ತಾ ಇಲಾಖೆಯ ಕಾಸರಗೋಡು ಜಿಲ್ಲಾ ಕೇಂದ್ರದ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜತೆಗೆ ಸಮಾಜ ಸೇವೆ, ಸಾಂಸ್ಕøತಿಕ-ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಸರಗೋಡಿನಲ್ಲಿ ಕನ್ನಡದ ಸಂರಕ್ಷಣೆಗಾಗಿ ನಡೆಯುತ್ತಿರುವ ಹೋರಾಟದಲ್ಲೂ ಸಕ್ರಿಯರಾಗಿದ್ದು, ಆಲ್ ಕೇರಳಾ ಫೆÇಟೋಗ್ರಾಫರ್ಸ್ ಅಸೋಸಿಯೇಶನ್ ಕಾಸರಗೋಡು ಘಟಕದ ಮಾಜಿ ಅಧ್ಯಕ್ಷ ಹಾಗೂ ಈಸ್ಟ್ ಯುನಿಟ್ನ ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.



