ನವದೆಹಲಿ: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನೆಯು ತನ್ನ ಅಚಲ ಸಂಕಲ್ಪವನ್ನು ಪುನರುಚ್ಚರಿಸಿದೆ. ಪಹಲ್ಗಾಮ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಅಂದು ನಡೆದ ಘಟನೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಸಲಾದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಸೇನೆಯು ಸ್ಮರಿಸಿದೆ.
ಈ ಸಂಬಂಧ ಸೇನೆಯು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನ್ಯಾಯ ದೊರಕಿದೆ, ಭಾರತ ಯಾವುದನ್ನೂ ಮರೆಯುವುದಿಲ್ಲ. ಗಡಿ ದಾಟಿದರೆ ಅದಕ್ಕೆ ತಕ್ಕ ಉತ್ತರ ಸಿಗುತ್ತದೆ ಎಂದು ಬರೆದುಕೊಂಡಿದೆ.
ಭಯೋತ್ಪಾದಕ ಅಡಗು ತಾಣಗಳನ್ನು ಧ್ವಂಸಗೊಳಿಸಲು ನಡೆಸಲಾದ 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯ ಯಶಸ್ಸನ್ನು ಸೇನೆ ಈ ಸಂದರ್ಭದಲ್ಲಿ ಮೆಲುಕು ಹಾಕಿದೆ.
ಪಹಲ್ಗಾಮ್ ದಾಳಿಯ 6 ತಿಂಗಳ ಬಳಿಕ ಕಾಶ್ಮೀರದಲ್ಲಿ ಚಿತ್ರೀಕರಣ ಆರಂಭಪಹಲ್ಗಾಮ್ ಉಗ್ರ ದಾಳಿ ಸಂತ್ರಸ್ತ ಸೇರಿ 56 ಮಂದಿಗೆ ಜಮ್ಮು ಸರ್ಕಾರದ ಪ್ರಶಸ್ತಿ
ಭಾರತದ ಮೇಲೆ ಭಯೋತ್ಪಾದನಾ ದಾಳಿ ನಡೆದರೆ ಅದಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು ಮೋದಿ ಸ್ಪಷ್ಟಪಡಿಸಿದ್ದರು. ಭಯೋತ್ಪಾದನಾ ಪ್ರಾಯೋಜಿಸುವ ಸರ್ಕಾರ ಮತ್ತು ಭಯೋತ್ಪಾದನಾ ಮಾಸ್ಟರ್ ಮೈಂಡ್ಗಳ ನಡುವೆ ಭಾರತ ವ್ಯತ್ಯಾಸ ತೋರುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು.
2025ರ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅಮಾಯಕರ ಪ್ರಾಣ ಪಕ್ಷಿ ಹಾರಿಹೋಗಿತ್ತು. 26 ಮಂದಿ ಮೃತಪಟ್ಟಿದ್ದರೆ, ಕೆಲವರಿಗೆ ಗಾಯಗಳಾಗಿದ್ದವು.
ಈ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮಿರದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಯಿತು.

