ಜೈಶಂಕರ್ ನಡುವಿನ ಸಭೆಯಲ್ಲಿ ಇಂಧನ ಸಹಕಾರದ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆದಿದೆ ಎಂದು ರಷ್ಯಾ ಪ್ರಕಟಣೆ ತಿಳಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೂ ಮಾತುಕತೆ ನಡೆಸಿರುವ ಮ್ಯಾಂಟುರೋವ್, ಮೋದಿ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಭಾರತ ಮತ್ತು ರಷ್ಯಾ ನಡುವೆ ತೈಲ ಮತ್ತು ಅನಿಲ ವಲಯದಲ್ಲಿ ದ್ವಿಪಕ್ಷೀಯ ಸಹಕಾರದ ಬಗ್ಗೆ ಮಾತುಕತೆ ನಡೆದಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.
'ರಷ್ಯಾದ ಕಂಪನಿಗಳು ಸ್ಥಿರವಾಗಿ ತೈಲ ಮತ್ತು ನೈಸರ್ಗಿಕ ಅನಿಲ ಸರಬರಾಜನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿವೆ ಎಂದು ಡೆನಿಸ್ ಮ್ಯಾಂಟುರೋವ್ ದೃಢಪಡಿಸಿದ್ದಾರೆ' ಎಂದು ಪ್ರಕಟಣೆ ತಿಳಿಸಿದೆ.
ಹೊರ್ಮುಜ್ ಜಲಸಂಧಿಯ ತಡೆಯಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯ ತಲ್ಲಣಗಳ ನಡುವೆ ರಷ್ಯಾದಿಂದ ಈ ಹೇಳಿಕೆ ಬಂದಿದೆ.
ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿದ ಬಳಿಕ ಜಾಗತಿಕವಾಗಿ ತೈಲ ಬೆಲೆಗಳು ಏರಿಕೆ ಕಂಡಿವೆ.

