ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಆರೋಪ ಕೇಳಿ ಬಂದಿತ್ತು.
ಆ ಬಳಿಕ ಅವರನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ಗೆ ವರ್ಗಾಯಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಭಿಯೋಗ ಪ್ರಕ್ರಿಯೆ ಎದುರಿಸುತ್ತಿರುವ ನ್ಯಾಯಮೂರ್ತಿ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

