ಕಾಸರಗೋಡು: ಕೇರಳದಲ್ಲಿ ಬಿಜೆಪಿ ಬೆಳವಣಿಗೆಗೆ ಕೆ.ಜಿ ಮಾರಾರ್ ಕೊಡುಗೆ ಮಹತ್ವದ್ದಾಗಿದ್ದು, ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟವರಲ್ಲಿ ಒಬ್ಬರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ.ರವೀಂದ್ರನ್ ತಿಳಿಸಿದ್ದಾರೆ.
ಅವರು ಬಿಜೆಪಿ ಕಾಸರಗೋಡು ಜಿಲ್ಲಾ ಕೇಂದ್ರ ಡಾ.ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಕೆ.ಜಿ ಮಾರಾರ್ ಸಂಸ್ಮರಣಾ ಸಮಾರಂಭದಲ್ಲಿ ಕೆ.ಜಿ ಮಾರಾರ್ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಿ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್.ಸುನೀಲ್, ಎನ್.ಬಾಬುರಾಜ್, ಜಿಲ್ಲಾ ಉಪಾಧ್ಯಕ್ಷ ಪಿ.ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಬಿ.ಜೆ.ಪಿ.ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಬಿಜೆಪಿ ಉದುಮ ಮಂಡಲ ಸಮಿತಿ ಅಧ್ಯಕ್ಷೆ ಶೈನಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯ್ಕ್ ಸೇರಿದಂತೆ ಹಿರಿಯ ನಾಯಕರು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



