ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದಂಗವಾಗಿ ಭಾನುವಾರ ಅಂತಾರಾಷ್ಟ್ರೀಯ ಖ್ಯಾತಿಯ ಪ್ರಸಿದ್ಧ ಬಾಲಪ್ರತಿಭೆ ಗಂಗಾ ಶಶಿಧರನ್ ತೃಶ್ಶೂರು ಅವರ ಗಂಗಾ ತರಂಗಮ್ ವಯಲಿನ್ ಫ್ಯೂಶನ್ ಕಾರ್ಯಕ್ರಮ ಜನಮನಸೂರೆಗೊಂಡಿತು.
ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡಾಗ ಕಿಕ್ಕಿರಿದ ಪ್ರೇಕ್ಷಕರ ಕರತಾಡನ ಮುಗಿಲುಮುಟ್ಟಿತ್ತು. ತನ್ನ ಹಾವಭಾವಗಳಿಂದ ಜನಮನಸೂರೆಗೊಂಡ ಬಾಲಪತ್ರಿಭೆಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿತ್ತು. ಶ್ರೀ ಶಿವಶಕ್ತಿ ಪೆರಡಾಲ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾ ಶಶಿಧರನ್ ಹಾಗೂ ತಂಡದವರನ್ನು ಅಭಿನಂದಿಸಲಾಯಿತು. ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಬ್ಯಾಂಡ್ ವಾದ್ಯಗಳೊಂದಿಗೆ ಕಲಾವಿದೆಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕಾರ್ಯಕ್ರಮದ ಕೊನೆಯಲ್ಲಿ ಕಲಾವಿದೆಯೊಂದಿಗೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಹತ್ತುಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

.jpg)
