HEALTH TIPS

ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಶಿರಿನ್‌ ಚೌಧರಿ ಬಂಧನ

 ಢಾಕಾಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 


ಢಾಕಾದ ಧನ್ಮಂಡಿಯ 8/ಎ ರಸ್ತೆಯಲ್ಲಿರುವ ನಿವಾಸದಲ್ಲಿ ಶಿರಿನ್ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೆದಾರಿ ಘಟಕ (ಡಿಬಿ) ವಶಕ್ಕೆ ಪಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಡಿಬಿ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ಖಚಿತಪಡಿಸಿದ್ದಾರೆ.

ಶಿರಿನ್‌ ಶರ್ಮಿನ್‌ ಚೌಧರಿ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್‌ ಆಗಿ 2013ರಿಂದ 2024ರ ಆಗಸ್ಟ್‌ವರೆಗೆ ಕಾರ್ಯ ನಿರ್ವಹಿಸಿದ್ದರು.

2025ರ ಆಗಸ್ಟ್ 5ರಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ 27 ದಿನಗಳ ನಂತರ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಅವರ ದೀರ್ಘಕಾಲದ ಸಂಸದೀಯ ಪಯಣ ಅಂತ್ಯಗೊಂಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries