HEALTH TIPS

"ನಾರಿ ಶಕ್ತಿ ಅಧಿನಿಯಮ ಲೋಕಸಭೆಯಲ್ಲಿ ವಿಫಲವಾಗಿದ್ದಕ್ಕೆ ದೇಶದ ಮಹಿಳೆಯರಲ್ಲಿ ನಾನು ಕ್ಷಮೆಯಾಚಿಸುತ್ತೇನೆ': ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ( ನಾರಿ ಶಕ್ತಿ ಅಧಿನಿಯಮ)ಯನ್ನು ಅಂಗೀಕರಿಸಲು ಸಾಧ್ಯವಾಗದಿದ್ದಕ್ಕಾಗಿ ಪ್ರಧಾನಿ ಮೋದಿ ದೇಶದ ಮಹಿಳೆಯರಲ್ಲಿ ಕ್ಷಮೆಯಾಚಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಸೋಲನುಭವಿಸಿದ ಮರುದಿನ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ದೇಶದ ಜನರೊಂದಿಗಿದ್ದೇವೆ.

ಆದರೆ ಕೆಲವರು ರಾಜಕೀಯ ಲಾಭಗಳ ಬಗ್ಗೆ ಮಾತ್ರ ಯೋಚಿಸುತ್ತಾರೆ. ಲೋಕಸಭೆಯಲ್ಲಿ ಮಹಿಳೆಯರ ಹಕ್ಕುಗಳನ್ನು ಹೇಗೆ ಹತ್ತಿಕ್ಕಲಾಗಿದೆ ಎಂಬುದನ್ನು ಪ್ರತಿಯೊಬ್ಬ ನಾಗರಿಕನೂ ನೋಡಿದ್ದಾನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಡಿಎಂಕೆ ಮತ್ತು ಎಸ್‌ ಪಕ್ಷ ಮಹಿಳೆಯರ ಹಕ್ಕುಗಳನ್ನು ಕಡೆಗಣಿಸಿ ಸ್ವಾರ್ಥ ರಾಜಕಾರಣ ಮಾಡುತ್ತಿವೆ. ವಿರೋಧ ಪಕ್ಷಗಳು 'ನಾರಿ ಶಕ್ತಿ'ಯನ್ನು ಹಗುರವಾಗಿ ಪರಿಗಣಿಸುತ್ತಿವೆ. ಜನರು ವಿರೋಧ ಪಕ್ಷಗಳನ್ನು ಶಿಕ್ಷಿಸುತ್ತಾರೆ. ಅವರು ಜನರ ಕೋಪದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಜಿಎಸ್‌ಟಿ, ಜನ್ ಧನ್, ಆಧಾರ್, ತ್ರಿವಳಿ ತಲಾಖ್, 370 ನೇ ವಿಧಿಯನ್ನು ವಿರೋಧಿಸಿದೆ. ಕಾಂಗ್ರೆಸ್ ಸುಧಾರಣಾ ವಿರೋಧಿ ಪಕ್ಷವಾಗಿದೆ. ಕಾಂಗ್ರೆಸ್ ಒಂದು ರಾಷ್ಟ್ರ ಒಂದು ಚುನಾವಣೆ, ಎಸ್‌ಐಆರ್, ವಕ್ಫ್ ಮಂಡಳಿ ಸುಧಾರಣೆಗಳನ್ನು ವಿರೋಧಿಸುತ್ತಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ತಮಿಳರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಡಿಎಂಕೆಗೆ ಅವಕಾಶ ಇತ್ತು. ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ರಾಜ್ಯಗಳು ಪ್ರಾತಿನಿಧ್ಯ ಕಳೆದುಕೊಳ್ಳುತ್ತವೆ ಎಂಬ ನಕಲಿ ನಿರೂಪಣೆಯನ್ನು ಹರಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries