ಟೆಲ್ ಅವೀವ್: ಭಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಾಕ್ಷ್ಯ ವಿಚಾರಣೆಯನ್ನು ರದ್ದುಪಡಿಸಲಾಗಿದೆ. ಯುದ್ಧದ ಕಾರಣದಿಂದಾಗಿ ಸುದೀರ್ಘವಾಗಿ ಮುಂದೂಡಲ್ಪಟ್ಟ ಪ್ರಕರಣದ ವಿಚಾರಣೆ ಸೋಮವಾರಕ್ಕೆ ನಿಗದಿಯಾಗಿತ್ತು. ಆದರೆ ವಿಚಾರಣೆಯ ಒಂದು ಗಂಟೆ ಮೊದಲು ಈ ಬೆಳವಣಿಗೆ ನಡೆದಿದೆ.
ನೆತನ್ಯಾಹು ಅವರ ವಕೀಲ ಅಮಿತ್ ಹದಾದ್ ಅವರ ಕೋರಿಕೆಯ ಮೇರೆಗೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಯನ್ನು ರದ್ದುಪಡಿಸಲಾಗಿದೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ.
ಇದು ನೆತನ್ಯಾಹು ವಿರುದ್ಧದ ಕ್ರಿಮಿನಲ್ ವಿಚಾರಣೆಯ ಭಾಗವಾಗಿದೆ. ನೆತನ್ಯಾಹು ವಿರುದ್ಧ ಲಂಚ, ವಂಚನೆ ಮತ್ತು ನಂಬಿಕೆ ಉಲ್ಲಂಘನೆ ಸೇರಿದಂತೆ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಲಾಗಿತ್ತು.

