HEALTH TIPS

ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ವತಿಯಿಂದ ಇಂದು ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ

ಮಂಜೇಶ್ವರ: ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಏ.19 ರಂದು ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.

ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಮುಂಬೈ ಸ್ಥಾಪಕಾಧ್ಯಕ್ಷ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಅಧ್ಯಕ್ಷರೂ ಆಗಿರುವ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ನಾರಾಯಣ ನಾೈಕ್ ನಡುಹಿತ್ಲು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞ ಡಾ. ಅಶ್ವಿನ್ ಶೆಟ್ಟಿ, ಇಮ್ಮಿಡಿಯೇಟ್ ಪಾಸ್ಟ್ ಡಯಾಟ್ರಿಕ್ಟ್ ಗವರ್ನರ್ ರೋಟರಿ ಡಿಸ್ಟ್ರಿಕ್ಟ್ ಡಾ. ವಿಕ್ರಮ್ ದತ್ತ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಮೀಂಜ ಗ್ರಾಮ ಪಂಚಾಯತಿ ಸದಸ್ಯೆ ಶರ್ಮಿಳ ಎಂ. ಶೆಟ್ಟಿ ಚಾರ್ಲ, ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ, ಡಾ. ಪುನೀತ ಶೆಟ್ಟಿ  ಕುಳೂರು ಉಪಸ್ಥಿತರಿರುವರು.

ವೈದ್ಯಕೀಯ ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣಿನ ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಇ.ಸಿ.ಜಿ., ಇ.ಎನ್.ಟಿ., ಜನರಲ್ ಮೆಡಿಸಿನ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆಯ ಜೊತೆಗೆ ಸೂಕ್ತ ಔಷಧಿ ಹಾಗೂ ಕನ್ನಡಕ ವಿತರಣೆ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಲು ಕರೆ ನೀಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries