HEALTH TIPS

ಮಹಿಳಾ ಮೀಸಲಾತಿ ಕಾಯ್ದೆ: ಲೋಕಸಭೆ, ರಾಜ್ಯಸಭೆಯ ಸದನ ನಾಯಕರಿಗೆ ಪ್ರಧಾನಿ ಮೋದಿ ಪತ್ರ

ನವದೆಹಲಿ: ಮಹಿಳಾ ಮೀಸಲಾತಿ ಕಾಯ್ದೆಯನ್ನು ಅದರ ನೈಜ ಆಶಯದೊಂದಿಗೆ ಜಾರಿಗೆ ತರುವ ಸಮಯ ಬಂದಿದೆ. 2029ರ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಮಹಿಳಾ ಮೀಸಲಾತಿ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೆ ಮುನ್ನ ಲೋಕಸಭೆ ಮತ್ತು ರಾಜ್ಯಸಭೆಯ ಸದನ ನಾಯಕರಿಗೆ ಬರೆದ ಪತ್ರದಲ್ಲಿ ಅವರು ಹೀಗೆ ಹೇಳಿದ್ದಾರೆ.

'ನಾರಿ ಶಕ್ತಿ ವಂದನ್ ಅಧಿನಿಯಮ' ಎಂದು ಕರೆಯಲಾಗುವ ಮೀಸಲಾತಿ ಕಾನೂನಿನ ತಿದ್ದುಪಡಿಗಳನ್ನು ಅಂಗೀಕರಿಸಲು ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಒಂದಾಗಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.

'ಭಾರಿ ಸಮಾಲೋಚನೆ ನಡೆಸಿ, ದೇಶದಾದ್ಯಂತ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಅದರ ನೈಜ ಆಶಯದೊಂದಿಗೆ ಜಾರಿಗೆ ತರುವ ಸಮಯ ಈಗ ಬಂದಿದೆ ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇವೆ. 2029ರ ಲೋಕಸಭೆ, ವಿಧಾನಸಭಾ ಚುನಾವಣೆಗಳನ್ನು ಮಹಿಳಾ ಮೀಸಲಾತಿಯೊಂದಿಗೆ ನಡೆಸುವುದು ಅನಿವಾರ್ಯವಾಗಿದೆ' ಎಂದು ಏಪ್ರಿಲ್ 11 ರಂದು ಬರೆದ ಪತ್ರದಲ್ಲಿ ಪ್ರಧಾನಿ ತಿಳಿಸಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನವನ್ನು ವಿಸ್ತರಿಸಲಾಗಿದ್ದು, ಏಪ್ರಿಲ್ 16ರಿಂದ 18ರವರೆಗೆ ಮೂರು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ.

ಮಹಿಳಾ ಮೀಸಲಾತಿ ಕಾಯ್ದೆಯು ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವುದನ್ನು ಖಚಿತಪಡಿಸಲಿದ್ದು, ಅವುಗಳಲ್ಲಿ 273 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ನಿಯಮವನ್ನು 2023ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಮೂಲಕ ತರಲಾಗಿತ್ತು.

ಆದಾಗ್ಯೂ, ಮಹಿಳಾ ಮೀಸಲಾತಿಯು 2027ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಜಾರಿಗೆ ಬರಬೇಕಿತ್ತು. ಅಂದರೆ ಪ್ರಸ್ತುತ ಕಾನೂನು ಹಾಗೆಯೇ ಮುಂದುವರಿದರೆ 2034ಕ್ಕಿಂತ ಮೊದಲು ಮೀಸಲಾತಿಯನ್ನು ಜಾರಿಗೆ ತರಲು ಸಾಧ್ಯವಾಗುತ್ತಿರಲಿಲ್ಲ.

ಇದನ್ನು 2029ರ ಲೋಕಸಭಾ ಚುನಾವಣೆಯಿಂದಲೇ ಜಾರಿಗೆ ತರಲು ನಾರಿ ಶಕ್ತಿ ವಂದನ್ ಅಧಿನಿಯಮದಲ್ಲಿ ಬದಲಾವಣೆಗಳ ಅಗತ್ಯವಿತ್ತು. ಆದ್ದರಿಂದ ಸರ್ಕಾರವು ಕಾನೂನಿಗೆ ತಿದ್ದುಪಡಿಗಳನ್ನು ಅಂಗೀಕರಿಸಲು ವಿಶೇಷ ಅಧಿವೇಶನವನ್ನು ನಡೆಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries