ತಿರುವನಂತಪುರಂ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಬೇಸಿಗೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುರುವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಶುಕ್ರವಾರ ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಿಗೆ ಮತ್ತು ಶನಿವಾರ ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

