ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ 5ನೇ ದಿನ ಮಂಗಳವಾರ ಕ್ಷೇತ್ರಾಚಾರ್ಯ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ಪ್ರಾತಃಕಾಲ ಗಣಪತಿ ಹೋಮ, ತತ್ವಕಲಶ ಪೂಜೆ, ತತ್ವ ಹೋಮ, ತತ್ವಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು. ವಿವಿಧೆಡೆಗಳಿಂದ ಸುವಸ್ತು ಸಮರ್ಪಣೆ ನಡೆಯಿತು. ಸಂಜೆ ಅನುಜ್ಞಾಬಲಿ, ಕ್ಷೇತ್ರಪಾಲನಲ್ಲಿ ಅನುಜ್ಞಾ ಪ್ರಾರ್ಥನೆ, ಅಂಕುರ ಪೂಜೆ, ತ್ರಿಕಾಲಪೂಜೆ, ಬಿಂಬಶುದ್ಧಿ, ಕಲಶಪೂಜೆ, ಮಹಾಪೂಜೆ ನಡೆಯಿತು.
ಬುಧವಾರದ ಕಾರ್ಯಕ್ರಮಗಳು:
ಪ್ರಾತಃಕಾಲ 6 ಗಂಟೆಯಿಂದ ಗಣಪತಿ ಹೋಮ, ತ್ರಿಕಾಲ ಪೂಜೆ, ಸಂಹಾರತತ್ವ ಹೋಮ, ತತ್ವಕಲಶಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ಯಾಪೂಜೆ, ತತ್ವಕಲಶಾಭೀಷೇಕ, ಜೀವ ಕಲಶ ಪೂಜೆ, ಜೀವೋದ್ವಾಸನೆ, ಜೀವಕಲಶ ಶಯ್ಯೋನ್ನಯನ, ಅಂಕುರ ಪೂಜೆ, ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅಂಕುರಪೂಜೆ, ತ್ರಿಕಾಲ ಪೂಜೆ, ಮಹಾಪೂಜೆ ನಡೆಯಲಿದೆ. ಸಂಜೆ 6 ರಿಂದ ಬಿಂಬಶುದ್ಧಿ ಕಲಶಾಭಿಷೇಕ, ಪೀಠಾವಾಸ, ಧ್ಯಾನಾಧಿವಾಸ, ಅವಾಸ ಹೋಮ, ಅವಾಸ ಬಲಿ, ತ್ರಿಕಾಲಪೂಜೆ, ಶಿರಸ್ತತ್ವ ಹೋಮ, ಪ್ರತಿಷ್ಠಾ ಹೋಮ, ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ, ಮಹಾಪೂಜೆ ನಡೆಯಲಿದೆ.

