ನವದೆಹಲಿ: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೊ(ಸಿಇಐಬಿ) ಕನ್ನಡ ನಟಿ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ ಅವರನ್ನು ಬಂಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿಗಳಾದ ಎಂ.ಎಂ.ಸುಂದ್ರೇಶ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.
ರನ್ಯಾ ರಾವ್ ಬಂಧನ ಪ್ರಶ್ನಿಸಿ ಅವರ ತಾಯಿ ಹಾಗೂ ಮತ್ತೊಬ್ಬ ಆರೋಪಿಯಾದ ಸಾಹಿಲ್ ಜೈಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠವು ವಜಾಗೊಳಿಸಿ, ಈ ಆದೇಶ ನೀಡಿದೆ.

