ಜಮ್ಮು: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಮೆಹರಾಜ್ ಮಲಿಕ್ ಮಂಗಳವಾರ ಕಥುವಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮೆಹರಾಜ್ ಮಲಿಕ್ ಅವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಆದೇಶದ ಮೇರೆಗೆ ಅವರನ್ನು ಬಿಡುಗಡೆ ಮಾಡಲಾಗಿದೆ.
ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಮಲಿಕ್, ನಾನು ಈಗ ಜೈಲಿನಿಂದ ಹೊರಬಂದಿದ್ದೇನೆ.
ನನಗೆ ನ್ಯಾಯ ಸಿಕ್ಕಿದ್ದು, ನಾನು ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.
ಜೈಲಿನಿಂದ ಮೆಹರಾಜ್ ಮಲಿಕ್ ಹೊರಬರುತ್ತಿದ್ದಂತೆ, ಅಲ್ಲಿ ನೆರೆದಿದ್ದ ನೂರಾರು ಬೆಂಬಲಿಗರು ಅವರ ಪರವಾಗಿ ಘೋಷಣೆಗಳನ್ನು ಕೂಗುವ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು.
ಆಮ್ ಆದ್ಮಿ ಪಕ್ಷದ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷರಾಗಿರುವ ಮೆಹರಾಜ್ ಮಲಿಕ್ ಅವರನ್ನು 2025ರ ಸೆಪ್ಟೆಂಬರ್‌ನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಬಂಧಿಸಿ ಕಥುವಾ ಜೈಲಿನಲ್ಲಿ ಇರಿಸಲಾಗಿತ್ತು.

