HEALTH TIPS

ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ: ಡಾ.ವೃಂದಾ ವಿಶ್ವನಾಥ-ನುಳ್ಳಿಪ್ಪಾಡಿಯಲ್ಲಿ ಉಚಿತ ಆರೋಗ್ಯ ವೈದ್ಯಕೀಯ ಶಿಬಿರ ಉದ್ಘಾಟಿಸಿ ಅಭಿಮತ

ಕಾಸರಗೋಡು: ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಇಂದಿನ ಕಾಲಘಟ್ಟದಲ್ಲಿ ಮಾನವನಿಗೆ ಆರೋಗ್ಯ ಮುಖ್ಯವಾಗಿದೆ. ಆರೋಗ್ಯವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ, ಸಾಮಾಜಿಕ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆರೋಗ್ಯ ಪ್ರಾಮುಖ್ಯವಾಗಿದೆ. ಆದ್ದರಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಪ್ರಸಾದ್ ನೇತ್ರಾಲಯದ ಡಾ.ವೃಂದಾ ವಿಶ್ವನಾಥ ಹೇಳಿದ್ದಾರೆ. 


ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮೀ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಾನುವಾರ ಜರಗಿದ ಉಚಿತ ಆರೋಗ್ಯ ವೈದ್ಯಕೀಯ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣನ್ ಚೆನ್ನಿಕೆರೆ ಅಧ್ಯಕ್ಷತೆ ವಹಿಸಿದ್ದರು. ನೇತ್ರತಜ್ಞೆ ಅಶ್ರಿತಾ, ಪ್ರಬಂಧಕ ಅಬ್ದುಲ್ ಖಲೀಲ್, ಡಾ.ಸಚಿನ್ ಉಪಸ್ಥಿತರಿದ್ದರು. 

ಲೋಕೇಶ್ ಅಣಂಗೂರು, ದಿನೇಶ್ ಅಣಂಗೂರು ಶಿಬಿರದ ನೇತೃತ್ವ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೋಟೆಕಣಿ ಸ್ವಾಗತಿಸಿ, ರಾಘವೇಂದ್ರ ಕೆ.ವಿ. ವಂದಿಸಿದರು. ವರಪ್ರಸಾದ್ ಕೋಟೆಕಣಿ ಹಾಗೂ ಉಪೇಂದ್ರ ಕೋಟೆಕಣಿ ಕಾರ್ಯಕ್ರಮ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries