ಲಖನೌ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.
ಜನ ಆಕ್ರೋಶ ಮಹಿಳಾ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ.ಅವರ ಕಾರ್ಯಗಳು ಮಹಿಳಾ ವಿರೋಧಿಯಾಗಿವೆ ಎಂದು ಹರಿಹಾಯ್ದರು.
ಆದ್ದರಿಂದ ಮಹಿಳೆಯರು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದೇಶಾದ್ಯಂತ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ಸಮಾಜವಾದಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಮಹಿಳಾ ವಿರೋಧಿ ಮನೋಭಾವದ ವಿರುದ್ಧ ಮಹಿಳೆಯರಲ್ಲಿರುವ ಅಸಮಾಧಾನವನ್ನು ಪಾದಾಯಾತ್ರೆ ಸಂಕೇತಿಸುತ್ತದೆ ಎಂದು ಯೋಗಿ ಹೇಳಿದ್ದಾರೆ.
ಯಾವುದೇ ಒತ್ತಡಕ್ಕೆ ತಲೆಬಾಗುವುದಿಲ್ಲ: ಚುನಾವಣಾ ಅಖಾಡದಲ್ಲಿ ವಿಜಯ್ ಭಾರತದ ಗಡಿ ದಾಟಿದರೆ ತಕ್ಕ ಪ್ರತ್ಯುತ್ತರ: 'ಆಪರೇಷನ್ ಸಿಂಧೂರ' ನೆನೆದ ಭಾರತೀಯ ಸೇನೆ
ದೇಶದಾದ್ಯಂತ ಲಕ್ಷಾಂತರ ತಾಯಂದಿರು ಮತ್ತು ಸಹೋದರಿಯರ ಆಕಾಂಕ್ಷೆಗಳಿಗೆ ತೀವ್ರ ನೋವುಂಟು ಮಾಡಿರುವ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ನಿರ್ಣಾಯಕ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುವಲ್ಲಿ ವಿಫಲವಾದದ್ದನ್ನು ವಿರೋಧಿಸಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿತ್ತು.
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಮತ್ತು ಲೋಕಸಭಾ ಕ್ಷೇತ್ರಗಳ ಸಂಖ್ಯೆ 850ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಿದ್ದ ಸಂವಿಧಾನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಹಿಳಾ ಮಿಸಲಾತಿ ಕಾಯ್ದೆಗೆ 131ನೇ ಸಂವಿಧಾನ ತಿದ್ದುಪಡಿ ತರುವ ಮೂಲಕ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿತ್ತು.

