ಕೊಲಂಬೊ: ತನ್ನ ಜಲ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರ ದೋಣಿಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾದ ನೌಕಾಪಡೆ ತಿಳಿಸಿದೆ.
ಮೀನುಗಾರರನ್ನು ಮನ್ನಾರ್ ಬಳಿ ಸೋಮವಾರ ಬಂಧಿಸಲಾಗಿದೆ.
ಈ ಆರೋಪದ ಮೇಲೆ ಈ ವರ್ಷ ಇಲ್ಲಿಯವರೆಗೆ 128 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, 18 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಏ.11ರಂದು 12 ಮಂದಿಯನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಬುಧವಾರ ಮಾಹಿತಿ ನೀಡಿದೆ.

