HEALTH TIPS

ಮಹಿಳಾ ಮೀಸಲಾತಿ ಕಾನೂನಿಗೆ ತಿದ್ದುಪಡಿ ತರುವ ಕ್ರಮ ಸ್ವಾಗತಾರ್ಹ-ಎಂ.ಎಲ್.ಅಶ್ವಿನಿ

ಕಾಸರಗೋಡು: ಕಾನೂನಿಗೆ ತಿದ್ದುಪಡಿ ತರುವ ಮೂಲಕ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರುವ ನರೇಂದ್ರ ಮೋದಿ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್.ಅಶ್ವಿನಿ ತಿಳಿಸಿದ್ದಾರೆ.


ಮಹಿಳೆಯರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಶೇ. 50 ಮೀಸಲಾತಿಯಂತೆಯೇ, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸುವುದರಿಂದ ಮಹಿಳಾ ಸಮುದಾಯಕ್ಕೆ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತರಬಹುದು. ಪ್ರಗತಿ ಮತ್ತುಮಹಿಳೆಯರಿಗೆ ಸಮಾನತೆ ಇದೆ ಎಂದು ಹೇಳಿಕೊಳ್ಳುವ ಕೇರಳದಲ್ಲಿ ಒಬ್ಬ ಮಹಿಳಾ ಮುಖ್ಯಮಂತ್ರಿಯೂ ಇಲ್ಲದಿರುವುದು ಎಡ ಮತ್ತು ಬಲ ರಂಗಗಳ ಮಹಿಳಾ ವಿರೋಧಿ ಮನಸ್ಥಿತಿಗೆ ಉದಾಹರಣೆಯಾಗಿದೆ. ಕಾಸರಗೋಡು ಜಿಲ್ಲೆಯಿಂದ ಇಲ್ಲಿಯವರೆಗೆ ಒಬ್ಬ ಮಹಿಳಾ ಪ್ರತಿನಿಧಿಯೂ ಕೇರಳ ವಿಧಾನಸಭೆಯನ್ನು ತಲುಪಿಸಲಾಗಿದಿರುವುದು ವಿಷಾದನೀಯ ಎಂದು ತಿಳಿಸಿದರು.


 

  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries