ಉಪ್ಪಳ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜೋಡುಕಲ್ಲು ನವೋದಯನಗರ ನಿವಾಸಿ ಮೋಹನ ಎನ್ (28) ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಇವರನ್ನು ಮಾರ್ಚ್ 30ರಂದು ಮನೆಯಲ್ಲಿ ಅಸೌಖ್ಯಗೊಂಡ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದ್ದು, ತಕ್ಷಣ ಇವರನ್ನು ಉಪ್ಪಳದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ಮೋಹನ ಇಲಿ ವಿಷ ಸೇವಿಸಿರುವುದು ಖಚಿತಗೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

