HEALTH TIPS

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಆಪ್ತ ಸಲೀಂ ಡೋಲಾ ಭಾರತಕ್ಕೆ ಹಸ್ತಾಂತರ

 ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಪ್ತ ಸಹಚರ ಸಲೀಂ ಡೋಲಾನನ್ನು ಮಂಗಳವಾರ ಮುಂಜಾನೆ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. 


ಇತ್ತೀಚೆಗೆ ಇಸ್ತಾಂಬುಲ್‌ನಲ್ಲಿ ನಡೆದ ಅತ್ಯಂತ ಮಹತ್ವದ ಕಾರ್ಯಾಚರಣೆಯಲ್ಲಿ ಡೋಲಾನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದೊಂದಿಗೆ ಗುಪ್ತಚರ ಸಂಸ್ಥೆಗಳು ನಡೆಸಿದ ಸಮನ್ವಯದ ಕಾರ್ಯಾಚರಣೆಯ ನಂತರ ಈ ಹಸ್ತಾಂತರ ಪ್ರಕ್ರಿಯೆ ನಡೆದಿದೆ.

ಸಲೀಂ ಡೋಲಾನನ್ನು ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಕರೆತರಲಾಗಿದ್ದು, ಪ್ರಸ್ತುತ ಗುಪ್ತಚರ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ನಂತರ, ಹೆಚ್ಚಿನ ತನಿಖೆಗಾಗಿ ಅವನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

'ಸಲೀಂನನ್ನು ಇತ್ತೀಚೆಗೆ ಇಸ್ತಾಂಬುಲ್‌ನಲ್ಲಿ ಬಂಧಿಸಲಾಗಿತ್ತು. ಇದೀಗ ಭಾರತಕ್ಕೆ ಹಸ್ತಾಂತರಿಸಲಾಗಿದೆ' ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries