HEALTH TIPS

ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ

ಮಂಜೇಶ್ವರ: ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಕುಳೂರಿನ ಸಕಾಜಿರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ ಭಾನುವಾರ ನಡೆಯಿತು.


ಕಾರ್ಯಕ್ರಮವನ್ನು ಉದ್ಯಮಿ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಅಧ್ಯಕ್ಷ ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಿದರು. ಸೇವಾ ಬಳಗದ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ನಾರಾಯಣ ನಾೈಕ್ ನಡುಹಿತ್ಲು ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞ ಡಾ. ಅಶ್ವಿನ್ ಶೆಟ್ಟಿ, ಇಮ್ಮಿಡಿಯೇಟ್ ಪಾಸ್ಟ್ ಡಯಾಟ್ರಿಕ್ಟ್ ಗವರ್ನರ್ ರೋಟರಿ ಡಿಸ್ಟ್ರಿಕ್ಟ್ ಡಾ. ವಿಕ್ರಮ್ ದತ್ತ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಡಾ.ಸತೀಶ್ ಭಂಡಾರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಮೀಂಜ ಗ್ರಾಮ ಪಂಚಾಯತಿ ಸದಸ್ಯೆ ಶರ್ಮಿಳ ಎಂ. ಶೆಟ್ಟಿ ಚಾರ್ಲ, ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸೌಮ್ಯ ಪಿ, ಡಾ. ಪುನೀತ ಶೆಟ್ಟಿ ಕುಳೂರು, ಸೇವಾ ಬಳಗದ ಪಿ.ಆರ್.ಒ. ಕಾರ್ತಿಕ್ ಶೆಟ್ಟಿ ಮಜಿಬೈಲು, ಸೇವಾ ಬಳಗದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದರು. ವೈದ್ಯಕೀಯ ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣಿನ ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಇ.ಸಿ.ಜಿ., ಇ.ಎನ್.ಟಿ., ಜನರಲ್ ಮೆಡಿಸಿನ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆಯ ಜೊತೆಗೆ ಸೂಕ್ತ ಔಷಧಿ ಹಾಗೂ ಕನ್ನಡಕ ವಿತರಣೆ ನಡೆಯಿತು. ರಕ್ತದಾನ ಶಿಬಿರದಲ್ಲಿ 80 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ರಕ್ತದಾನ ಮಾಡಿದ ರಕ್ತದಾನಿಗಳಿಗೆ ಸದಾಶಿವ ಕೆ.ಶೆಟ್ಟಿ ಕುಳೂರು ಕನ್ಯಾನ ಅವರು ನಗದು ಹಾಗೂ ಮೋಹನ್ ಶೆಟ್ಟಿ ಮಜ್ಜಾರ್ ಅವರ ವತಿಯಿಂದ ವಿಶೇಷ ಉಡುಗೊರೆ ನೀಡಿ ಅಭಿನಂದಿಸಲಾಯಿತು. ಸೇವಾ ಬಳಗದ ಕೋಶಾಧಿಕಾರಿ ಮೀರಾ ಆಳ್ವ ಸ್ವಾಗತಿಸಿ, ದೇವಿ ಪ್ರಸಾದ್ ಶೆಟ್ಟಿ ವಂದಿಸಿದರು. ಪ್ರಶಾಂತ್ ಕೆ.ಪಿ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries