HEALTH TIPS

Delhi Airport: ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಜನರಿಗೆ ಗಾಯ; ತಪ್ಪಿದ ದುರಂತ

 ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಿಟ್ಜರ್ಲೆಂಡ್‌ ಮೂಲದ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.


ಈ ಆಕಸ್ಮಿಕ ಘಟನೆಯಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಿಂದ ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ಗೆ ತೆರಳಬೇಕಿದ್ದ 'ಸ್ವಿಸ್' ವಿಮಾನಯಾನ ಸಂಸ್ಥೆಯ ಏರ್‌ಬಸ್ ವಿಮಾನ (ಂ330) ಭಾನುವಾರ ಬೆಳಗ್ಗೆ ಟೇಕ್ ಆಫ್ ಆಗಲು ರನ್‌ ವೇ ಮೇಲೆ ಚಲಿಸುತ್ತಿತ್ತು. ಈ ವೇಳೆ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಪೈಲಟ್ ವಿಮಾನವನ್ನು ನಿಲ್ಲಿಸಿದ್ದಾರೆ.

ನಂತರ ವಿಮಾನದ ತುರ್ತು ಬಾಗಿಲುಗಳನ್ನು ತೆರೆದು ಸ್ಲೈಡ್‌ಗಳ ಮೂಲಕ ಪ್ರಯಾಣಿಕರನ್ನು ರನ್‌ ವೇಯಲ್ಲಿ ಇಳಿಸಲಾಯಿತು. ವಿಮಾನದದಿಂದ ಇಳಿಯುವಾಗ 6 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿದ್ದ 228 ಪ್ರಯಾಣಿಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ವಿಮಾನಯಾನ ಸಂಸ್ಥೆಯ ಅಧಿಕೃತ ಹೇಳಿಕೆ...

ಈ ಘಟನೆ ಬಗ್ಗೆ 'ಸ್ವಿಸ್' ಸಂಸ್ಥೆ ಪ್ರತಿಕ್ರಿಯಿಸಿದ್ದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಇದಕ್ಕಾಗಿ ನಾವು ವಿಶೇಷ ಟಾಸ್ಕ್ ಫೋರ್ಸ್ ರಚಿಸಿದ್ದೇವೆ ಮತ್ತು ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಅದು ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿಡಿಯೊಗಳು ವೈರಲ್ ಆಗಿವೆ. ತಾಂತ್ರಿಕ ದೋಷಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries