HEALTH TIPS

ಕೇರಳ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: IMD ಸೂಚನೆ

ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಏಪ್ರಿಲ್‌ 7ರಿಂದ 10ರವರೆಗೆ ಉತ್ತರ ಭಾರತದಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ರಾಜಸ್ಥಾನ, ದೆಹಲಿ, ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಲವು ರಾಜ್ಯಗಳಿಗೆ ಐಎಂಡಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಏಪ್ರಿಲ್ 7 ರಿಂದ 9 ರವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರಾಖಂಡ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ರಾಜಸ್ಥಾನದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು.

ಛತ್ತೀಸಗಢ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಕ್ರಮವಾಗಿ ಏಪ್ರಿಲ್ 5 ಮತ್ತು 8 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 5 ಮತ್ತು 6 ರಂದು ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಈಶಾನ್ಯ ಭಾಗದಲ್ಲಿ ವಾರದುದ್ದಕ್ಕೂ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಹಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದೇಶದ ಹೆಚ್ಚಿನ ಭಾಗಗಳಲ್ಲಿ ಈ ವಾರದವರೆಗೆ ಹಗಲಿನ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಆಗಬಹುದು ಎಂದು ಐಎಂಡಿ ಹೇಳಿದೆ.

ಏಪ್ರಿಲ್ 7 ರಿಂದ 9 ರವರೆಗೆ ಪಶ್ಚಿಮ ಬಂಗಾಳ, ಉತ್ತರ ಒಡಿಶಾ, ಗುಜರಾತ್ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ತಪ್ಪಿಸುವಂತೆ ಐಎಂಡಿ ಸೂಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries