HEALTH TIPS

ರೆಪೊ ದರ ಯಥಾಸ್ಥಿತಿಯಲ್ಲಿ ಮುಂದುವರಿಕೆ : RBI ಗವರ್ನರ್ ಸಂಜಯ್ ಮಲ್ಹೋತ್ರಾ

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಉದ್ಭವಿಸಿರುವ ಜಾಗತಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿ ಎಚ್ಚರಿಕೆಯ ನಿಲುವನ್ನು ತಳೆದಿದ್ದು, ರೆಪೊ ದರವನ್ನು ಶೇ.5.25ರಲ್ಲೇ ಮುಂದುವರಿಸಿದೆ ಎಂದು ಬುಧವಾರ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.

ಒಂದೂವರೆ ತಿಂಗಳಿನಿಂದ ನಡೆಯುತ್ತಿರುವ ಮಧ್ಯಪ್ರಾಚ್ಯ ಯುದ್ಧ, ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ, ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಭಾರತದಂತಹ ಆಮದು ಅವಲಂಬಿತ ದೇಶಗಳ ಮೇಲೆ ಉಂಟಾಗಿರುವ ಆರ್ಥಿಕ ಮತ್ತು ಹಣದುಬ್ಬರ ಒತ್ತಡದ ನಡುವೆ ಈ ನೀತಿ ನಿರ್ಧಾರ ಹೊರ ಬಿದ್ದಿದೆ.

ಡಿಸೆಂಬರ್ 2025ರಲ್ಲಿ ರೆಪೊ ದರವನ್ನು ಪರಿಷ್ಕರಿಸಿದ ಬಳಿಕ, ಇದುವರೆಗೂ ಬದಲಾವಣೆ ಮಾಡಿಲ್ಲ. ತಟಸ್ಥ ನೀತಿ ಉಳಿಸಿಕೊಳ್ಳುವ ಮೂಲಕ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಹಣಕಾಸು ನೀತಿ ಸಮಿತಿಯು ಸರ್ವಾನುಮತದ ನಿರ್ಧಾರ ಕೈಗೊಂಡಿದೆ.

"ಉದ್ಭವಿಸುತ್ತಿರುವ ಬೃಹತ್ ಆರ್ಥಿಕತೆ ಮತ್ತು ಹಣಕಾಸು ಪರಿಸ್ಥಿತಿಗಳನ್ನು ಮೌಲ್ಯಮಾಪನ ಮಾಡಿದ ಬಳಿಕ, ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹಣಕಾಸು ನೀತಿ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ" ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries