HEALTH TIPS

SIR ಬಳಿಕ ಆಧಾರ್ ದತ್ತಾಂಶದಿಂದ ಮೃತ ವ್ಯಕ್ತಿಗಳ ಹೆಸರನ್ನು ತೆಗೆಯಲು ಮುಂದಾದ UIDAI: ವರದಿ

ನವದೆಹಲಿ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಬಳಿಕ, ಮೃತ ಮತದಾರರ ಹೆಸರನ್ನು ತನ್ನೊಂದಿಗೆ ಹಂಚಿಕೊಳ್ಳುವಂತೆ ಭಾರತದಲ್ಲಿ ಆಧಾರ್ ವಿತರಿಸುವ ಹೊಣೆಗಾರಿಕೆ ಹೊಂದಿರುವ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(UIDAI), ಭಾರತೀಯ ಚುನಾವಣಾ ಆಯೋಗವನ್ನು ಕೋರಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು NDTV ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೊದಲ ಮತ್ತು ಎರಡನೆ ಹಂತದ ಮತಪಟ್ಟಿಗಳ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ವೇಳೆ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿರುವ ಮತದಾರರ ದತ್ತಾಂಶವನ್ನು ತನ್ನೊಂದಿಗೆ ಹಂಚಿಕೊಳ್ಳುವಂತೆ ಫೆಬ್ರವರಿ ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಪತ್ರ ಬರೆದಿತ್ತು. ಇದರ ಉದ್ದೇಶ ಆಧಾರ್ ದತ್ತಾಂಶವನ್ನು ಪರಿಷ್ಕರಿಸುವುದಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು ಮೃತರ ಆಧಾರ್ ಸಂಖ್ಯೆಗಳನ್ನು ನಿಯಮಿತವಾಗಿ ತೆಗೆದು ಹಾಕುತ್ತದೆ.

ಆದರೆ, ಈ ಮನವಿಯ ಕುರಿತು ಚುನಾವಣಾ ಆಯೋಗ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ದತ್ತಾಂಶಗಳು ಕೇವಲ ಚುನಾವಣಾ ಆಯೋಗಕ್ಕೆ ಮಾತ್ರ ಸೇರಿದ್ದು, ಅದನ್ನು ಸರಕಾರಿ ಸಂಸ್ಥೆಗಳು ಸೇರಿದಂತೆ ಬಾಹ್ಯ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚುನಾವಣಾ ಆಯೋಗ ಸ್ವತಂತ್ರ ಶಾಸನಾತ್ಮಕ ಸಂಸ್ಥೆಯಾಗಿದ್ದು, ತನ್ನ ದತ್ತಾಂಶಗಳ ಸಮಗ್ರತೆಯನ್ನು ಅದು ಕಾಪಾಡಬೇಕಿದೆ ಎಂದೂ ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries