ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಎಲ್ಲಾ ಉದ್ದೋಗಿಗಳಿಗೆ ಸೂಚಿಸಿದೆ.
ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಅನುಕೂಲ ಮತ್ತು ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ಟಿಸಿಎಸ್ ಸೂಚಿಸಿದೆ.
ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.
TCS ನಾಸಿಕ್ ಸೌಲಭ್ಯದಲ್ಲಿ ಧಾರ್ಮಿಕ ಮತಾಂತರ ಮತ್ತು ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿರುವುದರ ಮಧ್ಯೆ ಈ ಬೆಳವಣಿಗೆ ನಡೆದಿದೆ.

