HEALTH TIPS

TMC ಕಾರ್ಯಕರ್ತನ ಮನೆ ಮೇಲೆ ದಾಳಿ, 100 ಕಚ್ಚಾ ಬಾಂಬ್‌ ಜಪ್ತಿ

ಪಶ್ಚಿಮ ಬಂಗಾಳ: ಇಲ್ಲಿನ ದಕ್ಷಿಣ 24 ಪರಗಣ ಜಿಲ್ಲೆಯ ಭಂಗಾರ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತನ ಎನ್ನಲಾಗುತ್ತಿರುವ ರಫಿಕುಲ್ ಇಸ್ಲಾಂ ಎಂಬುವವರ ಮನೆಯ (West Bengal) ಮೇಲೆ ದಾಳಿ ನಡೆಸಿದ ಪೊಲೀಸರು, ಭಾರಿ ಪ್ರಮಾಣದ ಸುಮಾರು 100 ಕಚ್ಚಾ ಬಾಂಬ್‌ಗಳನ್ನು (Shocking) ವಶಪಡಿಸಿಕೊಂಡಿದ್ದಾರೆ.

ಆತಂಕ ಸೃಷ್ಟಿ ಮಾಡಿದ ಘಟನೆ
ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ನಡೆದ ಈ ಘಟನೆ ತೀವ್ರ ಆತಂಕವನ್ನು ಸೃಷ್ಟಿಸಿದೆ. ನಿರ್ದಿಷ್ಟ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯ ಮನೆಯಲ್ಲಿ ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದಾರೆ.

ಚುನಾವಣಾ ಆಯೋಗವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಮ್ಮ ವ್ಯಾಪ್ತಿಯಲ್ಲಿ ಇಂತಹ ಸ್ಫೋಟಕಗಳು ಪತ್ತೆಯಾದರೆ ಅಥವಾ ಮತದಾರರಿಗೆ ಬೆದರಿಕೆ ಹಾಕುವಂತಹ ಪ್ರಕರಣಗಳು ನಡೆದರೆ ಆಯಾ ಪೊಲೀಸ್ ಅಧಿಕಾರಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಮತದಾರರು ಯಾವುದೇ ಭಯವಿಲ್ಲದೆ ಮತ ಚಲಾಯಿಸಲು ಅನುಕೂಲವಾಗುವಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಲು ಹಾಗೂ ಭದ್ರತೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಮೊದಲ ಹಂತದ ಮತದಾನ ಆರಂಭವಾಗಿದ್ದು, ಏಪ್ರಿಲ್ 29ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

ಮತದಾನ ನಡೆಯುವಲ್ಲಿ ಬಿಗಿ ಭದ್ರತೆ
ಎರಡನೇ ಹಂತದ ಮತದಾನ ನಡೆಯಲಿರುವ 142 ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಆಯೋಗ ಸಿದ್ಧತೆ ನಡೆಸಿದೆ. ಮತದಾನಕ್ಕೆ ಅಡ್ಡಿಪಡಿಸುವ ಯಾವುದೇ ಪ್ರಯತ್ನವನ್ನು ಬಲವಾಗಿ ಹತ್ತಿಕ್ಕಲು ಭದ್ರತಾ ಪಡೆಗಳಿಗೆ ಆದೇಶ ನೀಡಲಾಗಿದೆ. ಈ ಕ್ಷೇತ್ರಗಳಲ್ಲಿ 160 ಮೋಟಾರ್‌ ಸೈಕಲ್‌ಗಳಲ್ಲಿ ಎರಡು ತುಕಡಿಗಳ ಭದ್ರತಾ ಸಿಬ್ಬಂದಿ ಗಸ್ತು ತಿರುಗಲಿದ್ದು, ಪ್ರತಿಯೊಂದು ಬಡಾವಣೆ ಮತ್ತು ಗಲ್ಲಿಗಳಲ್ಲಿಯೂ ಭದ್ರತಾ ಪಡೆಗಳು ಇರುವುದನ್ನ ಖಚಿತಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತ ಮತ್ತು ಪೊಲೀಸ್ ಇಲಾಖೆಯ ನಡುವೆ ಉತ್ತಮ ಸಮನ್ವಯ ಸಾಧಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಬದ್ಧವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries