HEALTH TIPS

ತಮಿಳುನಾಡು ಚುನಾವಣೆ: ಪಕ್ಷದ ಕಾರ್ಯಕರ್ತೆಗೆ 'ಲೈಂಗಿಕ ಕಿರುಕುಳ'; TVK ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಚೆನ್ನೈ: ಪೂನಮಲ್ಲಿ ವಿಧಾನಸಭಾ ಕ್ಷೇತ್ರದ ಟಿವಿಕೆ ಅಭ್ಯರ್ಥಿ ಪ್ರಕಾಶ್ ಅಲಿಯಾಸ್ ಕುಟ್ಟಿ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಮಂಗಳವಾರ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಪದಾಧಿಕಾರಿಯೂ ಆಗಿರುವ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪಕ್ಕದ ತಿರುವಲ್ಲೂರು ಜಿಲ್ಲೆಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿಭಾಗಗಳ ಅಡಿಯಲ್ಲಿ ಕುಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ಹಿಂದೆ ಪಕ್ಷದ ಬೆಂಬಲಿಗನೊಬ್ಬನ ಮದುವೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪ್ರಕಾಶ್ ಕುಟ್ಟಿ ಜೊತೆ ಮಾತನಾಡಲು ಹಲವಾರು ಬಾರಿ ಪ್ರಯತ್ನಿಸಿದರೂ, ಅವರು ನಿರ್ಲಕ್ಷಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲು ಇಲ್ಲಿಗೆ ಬಂದಿದ್ದೇನೆ. ನನ್ನ ಪತಿ ಮತ್ತು ನಾನು ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವರು ನಮ್ಮ ಕರೆಗಳಿಗೆ ಸ್ವೀಕರಿಸಲಿಲ್ಲ. ನಾವು ಪಕ್ಷದ ನಾಯಕತ್ವಕ್ಕೆ ಅಧಿಕೃತವಾಗಿ ದೂರು ನೀಡಿದ್ದೇವೆ ಮತ್ತು ಇಷ್ಟು ದಿನ ತಾಳ್ಮೆಯಿಂದಿದ್ದೇವೆ" ಎಂದು ಹೇಳಿದ್ದಾರೆ.

"ಪಕ್ಷದ ನಾಯಕತ್ವವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಈಗ ಅವರು ಆರೋಪಿಯನ್ನೇ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ನಾವು ಹೇಗೆ ತಾಳ್ಮೆಯಿಂದಿರಲು ಸಾಧ್ಯವಿಲ್ಲ" ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries