HEALTH TIPS

ಕೇರಳದಲ್ಲಿಯೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಪ್ರಣಾಳಿಕೆ ಬಿಡುಗಡೆ ಮಾಡಿದ UDF

ಕೊಚ್ಚಿ: ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಡ್ಡಿ ರಹಿತ ಸಾಲ ಸೇರಿದಂತೆ ಹಲವು ಭರವಸೆಗಳನ್ನು ಇಂದು(ಗುರುವಾರ) ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮೈತ್ರಿಕೂಟ ನೀಡಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್, ಕೇರಳದ ಪ್ರತಿ ಕುಟುಂಬಕ್ಕೆ ₹25 ಲಕ್ಷ ವಿಮಾ ಯೋಜನೆಯನ್ನು ಒದಗಿಸಲಾಗುವುದು ಮತ್ತು ಸಣ್ಣ ಉದ್ಯಮಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

'ಕೇರಳ ರಾಜ್ಯ ಸಾರಿಗೆಯ ಎಲ್ಲಾ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಕಲ್ಯಾಣ ಪಿಂಚಣಿ ಮಾಸಿಕ ₹3 ಸಾವಿರ ಏರಿಕೆ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ ₹1 ಸಾವಿರ ಸಹಾಯಧನ ನೀಡಲಾಗುವುದು' ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿಮಾನಯಾನ ಕ್ಷೇತ್ರದ ಅಭಿವೃದ್ಧಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ, ₹100 ಕೋಟಿ ವಹಿವಾಟು ಹೊಂದಿರುವ ಸಣ್ಣ ಉದ್ಯಮಗಳಿಗೆ ಹಣಕಾಸಿನ ನೆರವು ಮತ್ತು ವಯನಾಡಿನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.

ಕೇರಳ ವಿಧಾನಸಭೆಗೆ ಏ.9ರಂದು ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries