ಈ ವಿಷಯ ಬೆಳಕಿಗೆ ಬಂದ ಕೂಡಲೇ, ಚುನಾವಣಾ ಆಯೋಗ ಡೈಮಂಡ್ ಹಾರ್ಬರ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದೆ. ಪ್ರಕರಣ ದಾಖಲಿಸಲಾಗಿದೆ ಹಾಗೂ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 29ರಂದು ನಡೆಯಲಿರುವ ಪಶ್ಚಿಮಬಂಗಾಳ ವಿಧಾನ ಸಭೆಯ ಎರಡನೇ ಹಂತದ ಮತದಾನದ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಳ್ಳಲಿದೆ.
ಕ್ರಿಮಿನಲ್ ಬೆದರಿಕೆ ಹಾಗೂ ಕಾನೂನು ಬಾಹಿರ ಕೃತ್ಯಗಳನ್ನು ಹತ್ತಿಕ್ಕುವ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್ಗಳ ಅಡಿಯಲ್ಲಿ ಡೈಮಂಡ್ ಹಾರ್ಬರ್ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯಪ್ರವೃತ್ತವಾದ ರಾಜ್ಯ ಸರಕಾರ ಡೈಮಂಡ್ ಹಾರ್ಬರ್ ಪೊಲೀಸ್ ಡಿಸ್ಟ್ರಿಕ್ಟ್ನಲ್ಲಿ ನಿಯೋಜಿತರಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಮತ್ತು ''ಸರಣಿ ದುರ್ನಡತೆ'' ಹಾಗೂ ತಟಸ್ಥೆ ಕಾಪಾಡಿಕೊಳ್ಳಲು ವಿಫಲವಾದ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮಗಳನ್ನು ಆರಂಭಿಸಿದ ಕೆಲವು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ.

