HEALTH TIPS

ಅಸ್ಸಾಂ ಸಿಎಂ ಸ್ಥಾನಕ್ಕೆ ಶರ್ಮಾ ರಾಜೀನಾಮೆ: ಮೇ 11ರ ಬಳಿಕ ಪ್ರಮಾಣ ವಚನ ಸಾಧ್ಯತೆ

 ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. 


ಹೊಸ ಸರ್ಕಾರ ರಚನೆಯಾಗುವವರೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಶರ್ಮಾ ಅವರಿಗೆ ಸೂಚಿಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮೇ 11ರ ನಂತರ ನಡೆಯುವ ಸಾಧ್ಯತೆಯಿದೆ ಎಂದು 57 ವರ್ಷದ ಶರ್ಮಾ ತಿಳಿಸಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ದಿನಾಂಕವನ್ನು ಪಕ್ಷದ ಕೇಂದ್ರ ವೀಕ್ಷಕ ಜೆ.ಪಿ. ನಡ್ಡಾ ನಿರ್ಧರಿಸಲಿದ್ದಾರೆ. ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಅವರು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

'ಶರ್ಮಾ ಅವರ ನೇತೃತ್ವದಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಿದ್ದರೂ, ಅವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಪಕ್ಷವು ಇನ್ನೂ ಸ್ಪಷ್ಟಪಡಿಸಿಲ್ಲ. 2021ರ ಗೆಲುವಿನ ನಂತರ ಸರ್ಬಾನಂದ ಸೋನೊವಾಲ್ ಅವರ ಬದಲಿಗೆ ಶರ್ಮಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದರಿಂದ, ಈ ಬಾರಿಯೂ ಬದಲಾವಣೆಯಾಗಬಹುದೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಆದರೆ, ಶರ್ಮಾ ಅವರೇ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ' ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಬಾರಿಯ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 126 ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಕೇವಲ 19 ಸ್ಥಾನಗಳನ್ನು ಪಡೆಯುವ ಮೂಲಕ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಕಾಂಗ್ರೆಸ್ ಮಿತ್ರಪಕ್ಷವಾದ ರೈಜೋರ್ ದಳ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ.

ಬಿಜೆಪಿ 82 ಸ್ಥಾನಗಳನ್ನು ಗೆದ್ದಿದೆ. ಮಿತ್ರಪಕ್ಷಗಳಾದ ಅಸೋಂ ಗಣ ಪರಿಷತ್ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ತಲಾ 10 ಸ್ಥಾನಗಳನ್ನು ಗೆದ್ದಿವೆ.  











ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries