ಗುವಾಹಟಿ: ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ ಅವರು ಅಸ್ಸಾಂನ ಮಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ, ಪ್ರಮಾಣ ವಚನ ಸ್ವೀಕಾರ ಸಮಾರಂಭ ಬುಧವಾರ ಮೇ 12 ರಂದು ಗುವಾಹಟಿಯ ಲೋಕಭವನದಲ್ಲಿ ನಿಗದಿಯಾಗಿದೆ
ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಅಂದು ಪ್ರಮಾಣವಚನ ಬೋಧಿಸಲಿದ್ದಾರೆ.
ಖಾನಪಾರಾದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ ಸಮಾರಂಭ ನಡೆಯಲಿದೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಗಣ್ಯರು, ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳು ಭಾಗವಹಿಸಲಿದ್ದಾರೆ.
ಹೊಸ ಸರ್ಕಾರ ರಚನೆಯಾಗುವವರೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಹಿಮಂತ ಬಿಸ್ವ ಶರ್ಮಾ ಅವರಿಗೆ ಈಗಾಗಲೇ ಸೂಚಿಸಿದ್ದರು.
ಸೋಮವಾರ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಅವರು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶರ್ಮಾ ಅಸ್ಸಾಂನ ಮಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ,
ಈ ಬಾರಿಯ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 126 ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಕೇವಲ 19 ಸ್ಥಾನಗಳನ್ನು ಪಡೆಯುವ ಮೂಲಕ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಕಾಂಗ್ರೆಸ್ ಮಿತ್ರಪಕ್ಷವಾದ ರೈಜೋರ್ ದಳ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ.
ಬಿಜೆಪಿ 82 ಸ್ಥಾನಗಳನ್ನು ಗೆದ್ದಿದೆ. ಮಿತ್ರಪಕ್ಷಗಳಾದ ಅಸ್ಸಾಂ ಗಣ ಪರಿಷತ್ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ತಲಾ 10 ಸ್ಥಾನಗಳನ್ನು ಗೆದ್ದಿವೆ.

