ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಉತ್ತರ ಪ್ರದೇಶದಲ್ಲಿ ಅಡಗಿದ್ದ ಈ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಭಾನುವಾರ ವಶಕ್ಕೆ ಪಡೆದಿತ್ತು.
ಬಳಿಕ ಅವರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಾರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಎಸ್‌ಐಟಿ ತಂಡವು ಎರಡು ವಾರಗಳ ಕಾಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಅನುಮತಿ ನೀಡಿದ್ದು, ಮೇ 24ರಂದು ಮತ್ತೆ ಹಾಜರುಪಡಿಸುವಂತೆ ಸೂಚಿಸಿದೆ.

